
ಮಡಿಕೇರಿ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಜೂನ್ 16 ರಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆ ವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ಪ್ಯಾಲೇಸ್ ಟೊಯಟಾ ಮೈಸೂರು, ಆರೇಂಜ್ ಕೌಂಟಿ ರೆಸಾರ್ಟ್, ಸಿದ್ದಾಪುರ, ಮೆಡ್ ಪ್ಲಸ್ ಮಂಗಳೂರು, ಆಲ್ಫಾ ಟೆಕ್ನಾಲಜಿ, ಮಡಿಕೇರಿ, ರಾಣಿ ಮದ್ರಾಸ್, ಮೈಸೂರು, ಜಸ್ಟ್ ಡಯಲ್, ಬೆಂಗಳೂರು ಇವರು ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ ವಿವರಗಳ ಪ್ರತಿಗಳೊಂದಿಗೆ ಉದ್ಯೋಗ ಮೇಳದಲ್ಲಿ ಹಾಜರಾಗುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಕೋರಿದ್ದಾರೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-225851 ನ್ನು ಸಂಪರ್ಕಿಸಬಹುದು.