alex Certify SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್

ಮೈಸೂರು: ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆಯ ವತಿಯಿಂದ ಅಕ್ಟೋಬರ್ 4 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆವರೆಗೆ ವಿದ್ಯಾರಣ್ಯಪುರಂನಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದ ಬಳಿ ಇರುವ ಉದ್ಯಾನವನದಲ್ಲಿ ಉದ್ಯೋಗ ಮೇಳ ಏರ್ಪಡಿಸಲಾಗಿದೆ.

ಉದ್ಯೋಗಮೇಳದಲ್ಲಿ ಹೆಸರಾಂತ ಸಂಸ್ಥೆಗಳು ಭಾಗವಹಿಸುತ್ತಿದ್ದು, ಖಾಲಿ ಇರುವ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲಿದ್ದಾರೆ. ಎಸ್.ಎಸ್.ಎಲ್.ಸಿ,, ಪಿಯುಸಿ, ಪದವಿ, ಐಟಿಐ, ಡಿಪ್ಲೊಮೊ ಹಾಗೂ ನಸಿಂಗ್ ವಿದ್ಯಾರ್ಹತೆ ಹೊಂದಿರುವ 18 ರಿಂದ 35 ವರ್ಷದ ವಯೋಮಿತಿಯೊಳಗಿನ ಪುರುಷ ಹಾಗೂ ಮಹಿಳಾ ನಿರುದ್ಯೋಗಿ ಅಭ್ಯರ್ಥಿಗಳು ಮೇಳದಲ್ಲಿ ಭಾಗವಹಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...