ಬೆಂಗಳೂರು : ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್ಸಿ ಅಧಿಸೂಚನೆ ಹೊರಡಿಸಿದೆ. ಇಂದಿನಿಂದ (ಆಗಸ್ಟ್ 12) ಸೆಪ್ಟೆಂಬರ್ 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ.
ಸಾಮಾನ್ಯ ಅಭ್ಯರ್ಥಿಗಳು ₹600, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ₹300, ಮಾಜಿ ಸೈನಿಕ ಅಭ್ಯರ್ಥಿಗಳು ₹50 ಶುಲ್ಕ ಪಾವತಿಸಬೇಕು. ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯವಾಗಿದೆ.
ತಲಾ 300 ಅಂಕಗಳಿಗೆ ನಡೆಯಲಿರುವ ಸ್ಪರ್ಧಾತ್ಮಕ ಮತ್ತು ನಿರ್ದಿಷ್ಟ ಪತ್ರಿಕೆಯಲ್ಲಿ ಗಳಿಸುವ ಅಂಕಗಳ ಶೇಕಡಾವಾರು ಆಧಾರದಲ್ಲಿ ಮತ್ತು ಮೀಸಲಾತಿ ನಿಯಮದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕೆಪಿಎಸ್ಸಿ ತಿಳಿಸಿದೆ.
ವಿದ್ಯಾರ್ಹತೆ
ಕನಿಷ್ಠ ಶೇ.50 ಅಂಕಗಳೊಂದಿಗೆ ಬಿ.ವಿ.ಎಸ್.ಸಿ ಅಥವಾ ಬಿ.ವಿ.ಎಸ್.ಸಿ ಮತ್ತು ಎ.ಹೆಚ್ ಪದವಿ, ಇತರೆ ಸಂಬಂಧಿತ ಪದವಿ ತೇರ್ಗಡೆ.
ಭಾರತೀಯ ಪಶುವೈದ್ಯಕೀಯ ಪರಿಷತ್ತಿನ ಕಾಯ್ದೆ 1984 ರ ಅಡಿಯಲ್ಲಿ IVS ಅಥವಾ ಕರ್ನಾಟಕ ಪಶುವೈದ್ಯಕೀಯ ಪರಿಷತ್ತಿನಲ್ಲಿ ರಿಜಿಸ್ಟ್ರೇಷನ್ ಪಡೆದಿರಬೇಕು.
ಅರ್ಹತೆ
ಕನಿಷ್ಠ 18 ವರ್ಷ ಆಗಿರಬೇಕು.
ಸಾಮಾನ್ಯ ಅರ್ಹತೆಯವರಿಗೆ ಗರಿಷ್ಠ 35 ವರ್ಷ ದಾಟಿರಬಾರದು.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ದಾಟಿರಬಾರದು..
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ದಾಟಿರಬಾರದು.
ಅಭ್ಯರ್ಥಿಗಳು ಕೆಪಿಎಸ್ಸಿ ವೆಬ್ಸೈಟ್ ವಿಳಾಸ https://www.kpsc.kar.nic.in/ ಕ್ಕೆ ಭೇಟಿ ನೀಡುವ ಮೂಲಕ ಅರ್ಜಿ ಸಲ್ಲಿಸಬಹುದು.