ಕೊರೊನಾ ಸಂಕಷ್ಟದ ಸಂದರ್ಭದಲ್ಲಿ ಹುದ್ದೆಗಳ ನೇಮಕಾತಿ ವಿಳಂಬವಾಗಿ ಆರಂಭವಾಗುತ್ತಿದ್ದ ಕಾರಣ ಉದ್ಯೋಗದ ನಿರೀಕ್ಷೆಯಲ್ಲಿದ್ದವರಿಗೆ ನಿರಾಸೆಯಾಗಿತ್ತು. ಇದೀಗ ಉಪನ್ಯಾಸಕ ಹುದ್ದೆ ಆಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಗುಡ್ ನ್ಯೂಸ್ ನೀಡಿದೆ.
JOB NEWS: ಅಬಕಾರಿ ಇನ್ಸ್ ಪೆಕ್ಟರ್ ಸೇರಿ ಕಂದಾಯ, ಗೃಹ ಇತರೆ ಇಲಾಖೆಗಳಲ್ಲಿ ನೇಮಕಾತಿಗೆ ಅರ್ಜಿ
ಹೌದು, ರಾಜ್ಯದಾದ್ಯಂತ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಖಾಲಿ ಇರುವ ಒಟ್ಟು 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಮುಂದಾಗಿದ್ದು, ಈ ಕುರಿತು ಈಗಾಗಲೇ ಅಧಿಸೂಚನೆ ಹೊರಡಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಮೆರಿಟ್ ಆಧಾರದ ಮೇಲೆ ನೇಮಕಾತಿ ನಡೆಯಲಿದ್ದು, 2015ರಲ್ಲಿ ಸಹಾಯಕ ಪ್ರಾಧ್ಯಾಪಕ ನೇಮಕಾತಿ ವೇಳೆ ಅರ್ಹ ಅಭ್ಯರ್ಥಿಗಳು ಇಲ್ಲದೆ ಖಾಲಿ ಉಳಿದ 145 ಹುದ್ದೆಗಳು ಹಾಗೂ ಹೊಸದಾಗಿ ಸೃಷ್ಟಿಯಾದ 1097 ಗಳಿಗೆ ನೇಮಕಾತಿ ನಡೆಯಲಿದೆ.