ಕರ್ನಾಟಕ ಅಂಚೆ ವೃತ್ತವು karnatakapost.gov.in ಅಧಿಕೃತ ವೆಬ್ಸೈಟ್ ಮೂಲಕ ಉದ್ಯೋಗ ಅಧಿಸೂಚನೆಗಳನ್ನು ಬಿಡುಗಡೆ ಮಾಡಿದ್ದು, ಆಸಕ್ತರು ನಾಳೆಯೊಳಗೆ (ಆ.5) ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿದೆ.
ಇತ್ತೀಚಿನ ಕರ್ನಾಟಕ ಅಂಚೆ ಕಚೇರಿ ಉದ್ಯೋಗಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಉದ್ಯೋಗಾಕಾಂಕ್ಷಿಗಳು ಅಧಿಕೃತ ಅಧಿಸೂಚನೆಯಲ್ಲಿ ಖಾಲಿ ಹುದ್ದೆಗಳ ವಿವರಗಳು, ವಿದ್ಯಾರ್ಹತೆ, ವಯಸ್ಸಿನ ಮಿತಿ, ಅರ್ಜಿ ಸಲ್ಲಿಸುವುದು ಹೇಗೆ ಮತ್ತು ಕರ್ನಾಟಕ ಪೋಸ್ಟಲ್ ಸರ್ಕಲ್ ಅರ್ಜಿ ನಮೂನೆ / ಆನ್ ಲೈನ್ ಲಿಂಕ್ ನ್ನು ನೀಡಲಾಗಿದೆ.
ಸಂಸ್ಥೆ : ಕರ್ನಾಟಕ ಅಂಚೆ ವೃತ್ತ
ಹುದ್ದೆ ಹೆಸರು : ಗ್ರಾಮೀಣ ಡಾಕ್ ಸೇವಕ್ (ಬಿಪಿಎಂ / ಎಬಿಪಿಎಂ)
ಹುದ್ದೆಗಳ ಸಂಖ್ಯೆ: 1940
ಅರ್ಹತೆ : 10ನೇ ತರಗತಿ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05-08-2024
ಭಾರತೀಯ ಅಂಚೆ ಇಲಾಖೆಯಿಂದ ಒಟ್ಟು 44228 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅದರಲ್ಲಿ ಕರ್ನಾಟಕ ಅಂಚೆ ವೃತ್ತದಲ್ಲಿ 1940 ಹುದ್ದೆಗಳು ಖಾಲಿ ಇದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು 10ನೇ ತರಗತಿ ಅಥವಾ ಎಸ್.ಎಸ್.ಎಲ್.ಸಿ ಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಕಂಪ್ಯೂಟರ್ ಜ್ಞಾನದ ಜೊತೆಗೆ ಸೈಕ್ಲಿಂಗ್ ಜ್ಞಾನ ಹೊಂದಿರಬೇಕು.
ವಯೋಮಾನ : ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ಪೂರೈಸಿರಬೇಕು ಹಾಗೂ ಗರಿಷ್ಠ 40 ವರ್ಷ ಮೀರಿರಬಾರದು.
ಆಯ್ಕೆ ವಿಧಾನ : 10ನೇ ತರಗತಿ/ ಎಸ್.ಎಸ್.ಎಲ್.ಸಿ ವಿದ್ಯಾರ್ಹತೆಯಲ್ಲಿ ಗಳಿಸಿರುವ ಅಂಕಗಳ ಆಧಾರದ ಮೇಲೆ ದಾಖಲೆಗಳ ಪರಿಶೀಲನೆ ನಡೆಸಿ ಹುದ್ದೆಗಳಿಗೆ ನೇಮಕ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : ಜುಲೈ 15, 2024
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಆಗಸ್ಟ್ 05, 2024
ಅರ್ಜಿ ಸಲ್ಲಿಸುವುದು ಹೇಗೆ..?
ಹಂತ 1 : ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ
ಹಂತ 2 : ಇಲಾಖೆಯ ವೆಬ್ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್ಲೈನ್ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
ಹಂತ 3 : ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ/
ಹಂತ 4 : ಅಪ್ಲಿಕೇಷನ್ ನಲ್ಲಿ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ
ಹಂತ 5 : ಶುಲ್ಕ ಪಾವತಿಸಿ ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.