ಬೆಂಗಳೂರು : ಕರ್ನಾಟಕ ಲೋಕ ಸೇವಾ ಆಯೋಗವು (ಕೆಪಿಎಸ್ಸಿ) ರಾಜ್ಯ ಲೆಕ್ಕ ಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿನ 97 ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಪ್ರಕಟಿಸಿದ್ದು, ಮಾರ್ಚ್ 18 ರಿಂದ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಿದೆ.
ಗ್ರೂಪ್ – ಎ’ ಹುದ್ದೆಗಳು (ಉಳಿಕೆ ಮೂಲ ವೃಂದ)
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ
ಸಹಾಯಕ ನಿಯಂತ್ರಕರು : 43 ಹುದ್ದೆ
ಗ್ರೂಪ್ – ಬಿ’ ಹುದ್ದೆಗಳು (ಉಳಿಕೆ ಮೂಲ ವೃಂದ)
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆ
ಲೆಕ್ಕಪರಿಶೋಧನಾಧಿಕಾರಿ : 54 ಹುದ್ದೆ
ವಿಶೇಷ ಸೂಚನೆ:
ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ, ವಿಳಾಸ, ಪ್ರವರ್ಗ, ತಂದೆ-ತಾಯಿ ಹೆಸರು, ವಿದ್ಯಾರ್ಹತೆ ಮುಂತಾದ ವಿಷಯಗಳನ್ನು ತಪ್ಪಾಗಿ ನಮೂದಿಸಿರುವುದಾಗಿ ತಿಳಿಸಿ ಸದರಿ ಮಾಹಿತಿಗಳನ್ನು ಬದಲಾವಣೆ ಮಾಡುವಂತೆ ಮನವಿ ಸಲ್ಲಿಸುತ್ತಿರುವ ಹಿನ್ನೆಲೆಯಲ್ಲಿ ಆಯೋಗಕ್ಕೆ ಒಂದು ಬಾರಿ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಿದ ನಂತರ ಸದರಿ ಅರ್ಜಿಯಲ್ಲಿನ ಮಾಹಿತಿಗಳನ್ನು ಆಯೋಗದ ಅಧಿಕಾರಿ/ಸಿಬ್ಬಂದಿಗಳಿಗೆ ತಂತ್ರಾಂಶದಲಿ ಬದಲಾವಣೆ ಮಾಡಲು ಸಾಧ್ಯವಿರದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳೇ ನೇರವಾಗಿ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಮಾಹಿತಿಗಳನ್ನು ಸರಿಪಡಿಸಿ ಅರ್ಜಿ ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ. ಈ ಸಂಬಂಧ ತದನಂತರ ಸಲ್ಲಿಸಲಾಗುವ ಯಾವುದೇ ಕೋರಿಕೆ/ಮನವಿಗಳನ್ನು ಆಯೋಗದಿಂದ ಪುರಸ್ಕರಿಸಲಾಗುವುದಿಲ್ಲ.
(1) ಅಭ್ಯರ್ಥಿಗಳು ಅರ್ಜಿಯನ್ನು ಭರ್ತಿ ಮಾಡುವ ಮೊದಲು ಎಲ್ಲಾ ವಿವರಗಳನ್ನು ಓದಿ ಅರ್ಥೈಸಿಕೊಂಡು ಆ ನಂತರವೇ ತಮಗೆ ಅನ್ವಯವಾಗುವ ವಿವರಗಳನ್ನು ಭರ್ತಿ ಮಾಡತಕ್ಕದ್ದು.
(2) ಒಮ್ಮೆ ಅರ್ಜಿ ಸಲ್ಲಿಸಿದ ನಂತರ ಅರ್ಜಿಯಲ್ಲಿ ವಿವರಗಳನ್ನು ತಿದ್ದುಪಡಿ / ಸೇರ್ಪಡೆ ಮಾಡುವಂತೆ ನೀಡುವ ಯಾವುದೇ ಮನವಿಗಳನ್ನು ತಿರಸ್ಕರಿಸಲಾಗುವುದು.
(3) ಅಭ್ಯರ್ಥಿಗಳು ವಯೋಮಿತಿ, ವಿದ್ಯಾರ್ಹತೆಗೆ ಸಂಬಂಧಿಸಿದ ಪ್ರಮಾಣ ಪತ್ರಗಳನ್ನು ಹಾಗೂ ಅರ್ಜಿಯಲ್ಲಿ ಕೋರಿರುವ ಎಲ್ಲಾ ಮೀಸಲಾತಿ ಪ್ರಮಾಣ ಪತ್ರ/ಇತರೆ ಪ್ರಮಾಣ ಪತ್ರಗಳನ್ನು ತಮ್ಮ ಹೆಸರಿನಲ್ಲಿಯೇ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಚಾಲ್ತಿಯಲ್ಲಿರುವಂತೆ ಅಧಿಸೂಚನೆಯ ಅನುಬಂಧ-2ರಲ್ಲಿ ಸೂಚಿಸಿರುವ ನಮೂನೆಗಳಲ್ಲಿಯೇ ಕಡ್ಡಾಯವಾಗಿ ಪಡೆದಿಟ್ಟುಕೊಂಡು ಸದರಿ ದಾಖಲೆಗಳನ್ನು ಅರ್ಜಿ ಸಲ್ಲಿಸುವಾಗ ಅಪ್ಲೋಡ್ ಮಾಡತಕ್ಕದ್ದು. (ದಾಖಲೆಗಳು ಸ್ಪಷ್ಟವಾಗಿರಬೇಕು) ತಪ್ಪಿದ್ದಲ್ಲಿ ಅವರ ಮೀಸಲಾತಿ/ಅಭ್ಯರ್ಥಿತ್ವವನ್ನು ತಿರಸ್ಕರಿಸಲಾಗುವುದು.
(4) ಅರ್ಜಿ ಸಲ್ಲಿಸುವ ಸಮಯದಲ್ಲಿ ಮೀಸಲಾತಿಯನ್ನು ಕೋರದೆ ತದನಂತರದಲ್ಲಿ ಮೀಸಲಾತಿಯನ್ನು ಪರಿಗಣಿಸುವಂತೆ ಕೋರಿ ಸಲ್ಲಿಸುವ ಮನವಿ/ದಾಖಲೆಗಳನ್ನು ಪರಿಗಣಿಸಲಾಗುವುದಿಲ್ಲ.
2.3 ಅರ್ಜಿಗಳನ್ನು Online ಮೂಲಕವೇ ಭರ್ತಿ ಮಾಡಿ, ಭಾವಚಿತ್ರ/ಸಹಿ /ವಯೋಮಿತಿ/ ವಿದ್ಯಾರ್ಹತೆ ಹಾಗೂ ಕೋರಿದ ಮೀಸಲಾತಿಗೆ ಸಂಬಂಧಿಸಿದ ಎಲ್ಲಾ ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ ಶುಲ್ಕವನ್ನು నోటో ಬ್ಯಾಂಕಿಂಗ್ / ಡೆಬಿಟ್ ಕಾರ್ಡ್/ ಕ್ರೆಡಿಟ್ ಕಾರ್ಡ್/UPI ಮೂಲಕ ಸಂದಾಯ ಮಾಡಬಹುದಾಗಿರುತ್ತದೆ.
ಶುಲ್ಕವನ್ನು ಪಾವತಿಸದ ಹಾಗೂ ದಾಖಲೆಗಳನ್ನು/ ಭಾವಚಿತ್ರ/ ಸಹಿಯನ್ನು ಅಪ್ಲೋಡ್ ಮಾಡದೇ ಇರುವ/ಅಸ್ಪಷ್ಟ ದಾಖಲೆಗಳನ್ನು ಅಪ್ಲೋಡ್ ಮಾಡಿರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ವಿಶೇಷ ಸೂಚನೆ: ಸದರಿ ಹುದ್ದೆಗಳಿಗೆ ಆನ್ಲೈನ್ ಅರ್ಜಿಯೊಂದಿಗೆ ಸಲ್ಲಿಸುವ ಲಗತ್ತುಗಳನ್ನು ಅವಶ್ಯಕ ಸಂದರ್ಭಗಳಲ್ಲಿ ಆಯೋಗವು ಪರಿಶೀಲನೆಗೆ ಒಳಪಡಿಸಬಹುದಾಗಿರುತ್ತದೆ. ಆದ್ದರಿಂದ ಅಭ್ಯರ್ಥಿಗಳು ಜಾಗರೂಕತೆಯಿಂದ ತಮಗೆ ಅನ್ವಯಿಸುವ ಎಲ್ಲಾ ದಾಖಲೆಗಳನ್ನು ಸ್ಪಷ್ಟವಾಗಿ ಗೋಚರಿಸುವ ರೀತಿಯಲ್ಲಿ ಆಪ್ಲೋಡ್ ಮಾಡತಕ್ಕದ್ದು. ಮೂಲ ದಾಖಲೆಗಳ ಪರಿಶೀಲನೆಯ ಸಂದರ್ಭದಲ್ಲಿ ಈಗಾಗಲೇ ಆನ್ಲೈನ್ ಅರ್ಜಿಯೊಂದಿಗೆ ಅಪ್ಲೋಡ್ ಮಾಡಿರುವ ಪ್ರಮಾಣ ಪತ್ರಗಳ ಮೂಲ ಪ್ರತಿಗಳನ್ನು ತಪ್ಪದೇ ಹಾಜರುಪಡಿಸತಕ್ಕದ್ದು.