alex Certify ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

ಕೊಪ್ಪಳ: ಜಿಲ್ಲಾ ಪಂಚಾಯತ್ ವತಿಯಿಂದ 2020-21ನೇ ಸಾಲಿನಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಮಹಾತ್ಮ ಗಾಂಧಿ ನರೇಗಾ ಯೋಜನೆಯ ಸಮರ್ಪಕ ಅನುಷ್ಠಾನಗೊಳಿಸಲು ಜಿಲ್ಲೆಯ ಏಳು ತಾಲ್ಲೂಕುಗಳ ಆಯ್ದ 122 ಗ್ರಾಮ ಪಂಚಾಯತಿಗಳಲ್ಲಿ ಗ್ರಾಮ ಕಾಯಕ ಮಿತ್ರ ಹುದ್ದೆಗೆ ನೇಮಕ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಆದರೂ ಸಹ ಕೆಲವು ತಾಲೂಕುಗಳ ಗ್ರಾಮ ಪಂಚಾಯತಿಗಳಿಗೆ ಅರ್ಹ ಅರ್ಜಿಗಳು ಸ್ವೀಕೃತವಾಗಿರುವುದಿಲ್ಲ.  ಈ ಕುರಿತು ಮರು ಅಧಿಸೂಚನೆಯನ್ನು ಹೊರಡಿಸಲು ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ತೀರ್ಮಾನಿಸಲಾಗಿದೆ.

ಅದರಂತೆ ಜಿಲ್ಲೆಯ ಕೊಪ್ಪಳ ತಾಲ್ಲೂಕಿನ ಬೆಟಗೇರಿ ಗ್ರಾಮ ಪಂಚಾಯತ್, ಗಂಗಾವತಿ ತಾಲ್ಲೂಕಿನ ಆನೆಗುಂದಿ, ಕುಷ್ಟಗಿ ತಾಲ್ಲೂಕಿನ ಚಳಗೇರಿ, ಕುಕನೂರು ತಾಲ್ಲೂಕಿನ ಮಂಗಳೂರು ಹಾಗೂ ಶಿರೂರು, ಯಲಬುರ್ಗಾ ತಾಲ್ಲೂಕಿನ ಚಿಕ್ಕಮ್ಯಾಗೇರಿ, ಮಾಟಲದಿನ್ನಿ, ಮುರಡಿ, ವಣಗೇರಿ ಹಾಗೂ ಮುಧೋಳ ಗ್ರಾಮ ಪಂಚಾಯಿತಿಗಳಲ್ಲಿ “ಗ್ರಾಮ ಕಾಯಕ ಮಿತ್ರ’’ ಹುದ್ದೆಗಳಿಗೆ ನವೆಂಬರ್ 28 ರಂದು ಅಧಿಸೂಚನೆ ಪ್ರಕಟವಾಗಲಿದೆ.  ಅರ್ಜಿ ಸಲ್ಲಿಸಲು ಡಿಸೆಂಬರ್ 8 ಕೊನೆಯ ದಿನವಾಗಿದ್ದು, ಈ ಹುದ್ದೆಗೆ ಮಾಸಿಕ 6000 ರೂ. ಗೌರವ ಧನ(ಕಾರ್ಯನಿರ್ವಹಣೆ ಆಧರಿಸಿ 5000 ರೂ. ಪ್ರೋತ್ಸಾಹ ಧನ) ನಿಗದಿಪಡಿಸಲಾಗಿದೆ.

ಅರ್ಹತೆಗಳು:

ಕಾಯಕ ಮಿತ್ರ ಹುದ್ದೆಗಳಿಗೆ ಮಹಿಳೆಯರು ಮಾತ್ರ ಅರ್ಜಿಯನ್ನು ಸಲ್ಲಿಸಬೇಕು. ವಿದ್ಯಾರ್ಹತೆ ಕನಿಷ್ಠ 10 ನೇ ತರಗತಿ ಉತ್ತಿರ್ಣರಾಗಿರಬೇಕು.  ಅಭ್ಯರ್ಥಿಯು ದಿನಾಂಕ 01.01.2021ಕ್ಕೆ ಅನ್ವಯಿಸುವಂತೆ ತಾನು ಅರ್ಜಿ ಸಲ್ಲಿಸುವ ಗ್ರಾಮ ಪಂಚಾಯತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಕ್ರಿಯಾಶೀಲ ಜಾಬ್ ಕಾರ್ಡ ಹೊಂದಿರಬೇಕು.  ಅಭ್ಯರ್ಥಿಯು ಕಳೆದ 5 ವರ್ಷಗಳಲ್ಲಿ (2018-19, 2019–20, 2020–21, 2021-22 ಮತ್ತು 2022-23) .’ಕನಿಷ್ಠ 2 ವರ್ಷ ಈ ಯೋಜನೆಯಡಿ ಅಕುಶಲ ಕಾರ್ಮಿಕರಾಗಿ ಕೆಲಸ ನಿರ್ವಹಿಸಿರಬೇಕು.

ವಯೋಮಿತಿ ದಿನಾಂಕ 01.01.2021ಕ್ಕೆ ಅನ್ವಯಿಸುವಂತೆ 45 ವರ್ಷ ಮೀರಿರಬಾರದು. ಓದು ಮತ್ತು ಬರಹ ಚೆನ್ನಾಗಿ ತಿಳಿದಿರಬೇಕು.  ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಸಲ್ಲಿಸುವಾಗ ಆಯಾ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ವಾಸಿಸುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ಅಭ್ಯರ್ಥಿಯ ಪರಿಣಾಮಕಾರಿ ಸಂವಹನ ಕೌಶಲ್ಯ, ಉತ್ತಮ ನಾಯಕತ್ವ ಗುಣ ಹಾಗೂ ಸಮುದಾಯದೊಂದಿಗೆ ಸ್ಪಂದಿಸುವ ಗುಣಲಕ್ಷಣ ಹೊಂದಿರಬೇಕು. ಗ್ರಾಮ ರೋಜ್‌ಗಾರ್ ಮಿತ್ರರು ಸಮುದಾಯ ಕಾರ್ಯನಿರ್ವಹಣೆ ಮಾಡಲು ನಿರ್ದಿಷ್ಟ ಸಮಯವನ್ನು ನೀಡಬೇಕಾಗಿದ್ದು, ಇದಕ್ಕೆ ಗ್ರಾಮ ರೋಜ್‌ಗಾರ ಮಿತ್ರರ ಕುಟುಂಬ ಮತ್ತು ಸಮಾಜ ಬೆಂಬಲವಾಗಿರಬೇಕು.

ವಿಶೇಷ ಸೂಚನೆ:

ಗ್ರಾಮ ಕಾಯಕ ಮಿತ್ರ ಹುದ್ದೆಗೆ ಡಿಸೆಂಬರ್ 08ರ ಮಧ್ಯಾಹ್ನ 1.30 ಗಂಟೆಯೊಳಗೆ ಸಂಬಂಧಿಸಿದ ಗ್ರಾಮ ಪಂಚಾಯತಿಯಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದ್ದು, ನಿಗದಿತ ದಿನಾಂಕ ಮತ್ತು ಸಮಯದ ನಂತರ ಬಂದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಆಯ್ಕೆ ವಿಧಾನ, ಕರ್ತವ್ಯಗಳು ಮತ್ತು ಇನ್ನಿತರ ವಿವರಗಳಿಗೆ ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ಗ್ರಾಮ ಪಂಚಾಯತಿಯಲ್ಲಿ ಮಾಹಿತಿ ಪಡೆಯುವುದಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...