ನವದೆಹಲಿ: ಪಶ್ಚಿಮ ಮಧ್ಯ ರೈಲ್ವೆಯಲ್ಲಿ 165 ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಮಾರ್ಚ್ 1 ರಿಂದ ಅರ್ಜಿ ಸಲ್ಲಿಕೆ ಆರಂಭವಾಗಿದ್ದು, ಮಾ. 30 ರವರೆಗೆ ಅರ್ಜಿ ಸಲ್ಲಿಸಬಹುದು.
ಫಿಟ್ಟರ್, ವೆಲ್ಡರ್, ಎಲೆಕ್ಟ್ರಿಷಿಯನ್, ಕಂಪ್ಯೂಟರ್ ಆಪರೇಟರ್, ಪ್ರೋಗ್ರಾಮಿಂಗ್ ಅಸಿಸ್ಟೆಂಟ್, ಸೆಕ್ರೆಟರಿಯಟ್ ಅಸಿಸ್ಟೆಂಟ್, ಪೈಂಟರ್, ಕಾರ್ಪೆಂಟರ್ ಮೊದಲಾದ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ಅಪ್ರೆಂಟಿಸ್ ಗಳ ನೇಮಕಾತಿಗೆ ಯಾವುದೇ ಪರೀಕ್ಷೆ ಇರುವುದಿಲ್ಲ.
10 ನೇ ತರಗತಿಯ ಅಂಕ ಆಧರಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹುದ್ದೆಗೆ ಸಂಬಂಧಿಸಿದ ಟ್ರೇಡ್ ನಲ್ಲಿ ಐಟಿಐ ಪ್ರಮಾಣಪತ್ರವನ್ನು ಹೊಂದಿರಬೇಕು. ಮಾಹಿತಿಗಾಗಿ www.rrccr.com, www.mponline.gov.in ಗೆ ಭೇಟಿ ನೀಡಬಹುದಾಗಿದೆ ಎಂದು ಹೇಳಲಾಗಿದೆ.