alex Certify ಉದ್ಯೋಗ ವಾರ್ತೆ: ವಿವಿಧ ಕಂಪನಿಗಳಲ್ಲಿ ನೇರ ನೇಮಕಾತಿ; ಇಲ್ಲಿದೆ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗ ವಾರ್ತೆ: ವಿವಿಧ ಕಂಪನಿಗಳಲ್ಲಿ ನೇರ ನೇಮಕಾತಿ; ಇಲ್ಲಿದೆ ಮಾಹಿತಿ

ಚಿತ್ರದುರ್ಗ: ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಏಪ್ರಿಲ್ 21ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ರವರೆಗೆ ನೇರ ನೇಮಕಾತಿ ಸಂದರ್ಶನ ಹಮ್ಮಿಕೊಳ್ಳಲಾಗಿದೆ.

ಸಂದರ್ಶನದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಪುರುಷ, ಮಹಿಳೆ ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳುವ ಸಂಬಂಧ ಭಾಗವಹಿಸಲಿವೆ.

ಎಸ್‍ಎಸ್‍ಎಲ್‍ಸಿ, ಪಿಯುಸಿ, ಡಿಪ್ಲೊಮಾ, ಐಟಿಐ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ 18 ರಿಂದ 30 ವರ್ಷದೊಳಗಿರುವ ಆಸಕ್ತರು ನೇರ ನೇಮಕಾತಿ ಸಂದರ್ಶನದಲ್ಲಿ ಭಾಗವಹಿಸಬಹುದು. 5 ಪ್ರತಿ ಬಯೋಡಾಟಾ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಪೋಟೋಸ್, ಆಧಾರ್ ಕಾರ್ಡ್ ಸೇರಿದಂತೆ ಅಗತ್ಯ ದಾಖಲೆಗಳೊಂದಿಗೆ ಪಾಲ್ಗೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಯಮ ಕೇಂದ್ರ ಚಿತ್ರದುರ್ಗ ಕಚೇರಿ ಹಾಗೂ ದೂರವಾಣಿ ಸಂಖ್ಯೆ 7022459064, 8310785143, 8105619020 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...