alex Certify SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC, PUC ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಉದ್ಯೋಗಾವಕಾಶ

ಚಿತ್ರದುರ್ಗ: ಉದ್ಯೋಗ ಮತ್ತು ತರಬೇತಿ ಇಲಾಖೆ ವತಿಯಿಂದ ಇದೇ ಜುಲೈ 27 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆವರೆಗೆ ಚಿತ್ರದುರ್ಗ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಮೇಳದಲ್ಲಿ ವಿವಿಧ ಖಾಸಗಿ ಕಂಪನಿಗಳು ತಮ್ಮ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸಲು ಅಭ್ಯರ್ಥಿಗಳನ್ನು ನೇರವಾಗಿ ಆಯ್ಕೆ ಮಾಡಿಕೊಳ್ಳಲಿದ್ದಾರೆ.

ವಿದ್ಯಾರ್ಹತೆ:

ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲಮೋ, ಬಿ.ಎ, ಬಿಕಾಂ, ಬಿಎಸ್ಸಿ, ಬಿಬಿಎಂ ಮತ್ತು ಇತರೆ ಪದವೀಧರರು. 18 ರಿಂದ 30 ವರ್ಷದೊಳಗಿರಬೇಕು.

ದಾಖಲೆಗಳು:

ಬಯೋಡಾಟ-6 ಪ್ರತಿ, ವಿದ್ಯಾರ್ಹತೆಯ ಪ್ರಮಾಣ ಪತ್ರಗಳು, ಫೋಟೋ ತರಬೇಕು. ಮೇಳದಲ್ಲಿ ಭಾಗವಹಿಸುವರ ಸಂಸ್ಥೆಗಳು ಖಾಸಗಿ ಸಂಸ್ಥೆಯಾಗಿರುತ್ತದೆ. ಈ ಸಂದರ್ಶನದಲ್ಲಿ ಭಾಗವಹಿಸಲು ಇಚ್ಚಿಸುವ ಅಭ್ಯರ್ಥಿಗಳು ತಮ್ಮ ಸ್ವಂತ ಖರ್ಚಿನಲ್ಲಿ ಹಾಜರಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಚಿತ್ರದುರ್ಗ ಕಚೇರಿಯನ್ನು ಅಥವಾ ದೂರವಾಣಿ ಸಂಖ್ಯೆ 7022459064, 8105619020ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...