alex Certify SSLC ಫೇಲಾದವರು ಸೇರಿ ವಿವಿಧ ವಿದ್ಯಾರ್ಹತೆ ಹೊಂದಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

SSLC ಫೇಲಾದವರು ಸೇರಿ ವಿವಿಧ ವಿದ್ಯಾರ್ಹತೆ ಹೊಂದಿ ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಸಿಹಿ ಸುದ್ದಿ

ಬೀದರ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ ಆವರಣ, ಕುಂಬಾರವಾಡಾ ಕ್ರಾಸ್, ಮನ್ನಳ್ಳಿ ರೋಡ, ಬೀದರನಲ್ಲಿ ಜನವರಿ 22 ರಂದು  ಬೆಳಿಗ್ಗೆ 10 ರಿಂದ 3 ಗಂಟೆಯವರೆಗೆ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ.

ಉದ್ಯೋಗ ಮೇಳದಲ್ಲಿ 10ಕ್ಕು ಹೆಚ್ಚು ಪ್ರತಿಷ್ಠಿತ ಕಂಪನಿಗಳು ಭಾಗವಹಿಸುತ್ತಿವೆ. ವಿದ್ಯಾರ್ಹತೆ ಎಸ್.ಎಸ್.ಎಲ್.ಸಿ ಫೇಲ್., ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಪದವಿಧರರು ಹಾಗೂ ಸ್ನಾತಕೋತ್ತರ ಪದವಿಧರರು, ಬಿಇ, ಸಿಎಸ್, ಐಎಸ್, ಎಂಟೆಕ್, ಎಂಬಿಎ, ಎಂಕಾಂ, ಬಿಕಾಂ, ಬಿಬಿಎ ಅಭ್ಯರ್ಥಿಗಳು ಈ ಉದ್ಯೋಗ ಮೇಳದ ಸದುಪಯೋಗವನ್ನು ಪಡೆದುಕೊಳ್ಳಬಹುದಾಗಿದೆ.

ಈ ಉದ್ಯೋಗ ಮೇಳದಲ್ಲಿ ಹಾಜರಾದ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆ ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ 08482-234682, 8217886740 ಬೀದರ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಸಂಪರ್ಕಿಸಲು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...