ರಾಯಚೂರು: ಇಲ್ಲಿಯ ಕೈಗಾರಿಕ ತರಬೇತಿ ಮತ್ತು ಉದ್ಯೋಗ ಇಲಾಖೆ ವತಿಯಿಂದ ರಾಯಚೂರು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಇದೇ ಮಾ. 25 ರಂದು ಮಿನಿ ಉದ್ಯೋಗ ಮೇಳ ಆಯೋಜಿಸಿದೆ.
ಸದರಿ ಉದ್ಯೋಗ ಮೇಳವು ಬೆಳಿಗ್ಗೆ 10 ರಿಂದ ಸಾಯಂಕಾಲ 3 ಗಂಟೆಯವರೆಗೆ ನಡೆಯಲಿದ್ದು, 7ಕ್ಕೂ ಹೆಚ್ಚು ಖಾಸಗಿ (ರಾಯಚೂರು, ಬೆಂಗಳೂರು, ಧಾರವಾಡ) ಕಂಪನಿಗಳು ಭಾಗವಹಿಸಿ ಅರ್ಹ ಅಭ್ಯರ್ಥಿಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಿಕೊಳ್ಳಲಾಗುವುದು.
ಅರ್ಹತೆಗಳು:
ಎಸ್.ಎಸ್.ಎಲ್.ಸಿ,, ಪಿಯುಸಿ, ಐಟಿಐ, ಪದವಿಧರರು ಭಾಗವಹಿಸಬಹುದು, 18 ರಿಂದ 35 ವರ್ಷ ವಯೋಮಿತಿಯ ಪುರುಷ ಹಾಗೂ ಮಹಿಳೆ ಭಾಗವಹಿಸಬಹುದು, ವಿದ್ಯಾರ್ಹತೆಯ ಅಂಕಪಟ್ಟಿ ಜೆರಾಕ್ಷ್ ಪ್ರತಿ, ಮತ್ತು ತಮ್ಮ ಬಯೋಡಾಟಾ, ಆಧಾರ್ ಕಾರ್ಡ್ ಪ್ರತಿ, ಇತ್ತೀಚಿನ ಭಾವಚಿತ್ರ, ಉದ್ಯೋಗ ಮೇಳದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ, ಉದ್ಯೋಗ ಮೇಳಕ್ಕೆ ಹಾಜರಾಗುವವರು ತಮ್ಮ ಸ್ವಂತ ಖರ್ಚಿನಲ್ಲಿ ಬರಬೇಕು, ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕೋವಿಡ್-19ರ ಸುರಕ್ಷತಾ ಕ್ರಮಗಳನ್ನು ಅನುಸರಿಸಿರಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ದೂರವಾಣಿ ಸಂಖ್ಯೆ: 08532-231684, 7795915171, 8296483501ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ಮತ್ತು ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.