alex Certify ಉದ್ಯೋಗಾವಕಾಶ: ಸ್ಥಳದಲ್ಲೇ ನೇಮಕಾತಿ ಆದೇಶ – 7, 10 ನೇ ತರಗತಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಉದ್ಯೋಗಾವಕಾಶ: ಸ್ಥಳದಲ್ಲೇ ನೇಮಕಾತಿ ಆದೇಶ – 7, 10 ನೇ ತರಗತಿ ಸೇರಿ ವಿವಿಧ ವಿದ್ಯಾರ್ಹತೆ ಹೊಂದಿದವರಿಗೆ ಸಿಹಿ ಸುದ್ದಿ

ಶಿವಮೊಗ್ಗ: ಜಿಲ್ಲಾಡಳಿತ, ಕೌಶಲ್ಯ ಅಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ ಸಂಯುಕ್ತಾಶ್ರಯದಲ್ಲಿ ಜನವರಿ 19 ರಂದು ಬೆಳಗ್ಗೆ 9 ಗಂಟೆಯಿಂದ ಶಿವಮೊಗ್ಗದಲ್ಲಿ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಪಂಪನಗರ, ಗುತ್ಯಪ್ಪ ಕಾಲೋನಿ ಎರಡನೇ ಕ್ರಾಸ್ ನಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ. 18 ರಿಂದ 35 ವರ್ಷ ವಯೋಮಿತಿಯವರು ಭಾಗವಹಿಸಬಹುದಾಗಿದ್ದು, ಉಚಿತ ಪ್ರವೇಶ ಇರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲಿ ನೇಮಕಾತಿ ಪತ್ರ ವಿತರಿಸಲಾಗುತ್ತದೆ.

7, 10 ನೇ ತರಗತಿ, ಪಿಯುಸಿ, ಐಟಿಐ, ಡಿಪ್ಲೊಮಾ, ಬಿಇ, ಯಾವುದೇ ಪದವಿ, ಸ್ನಾತಕೋತ್ತರ ಪದವೀಧರರು ಹಾಗೂ ವಿಶೇಷಚೇತನ ಅಭ್ಯರ್ಥಿಗಳು ಭಾಗವಹಿಸಬಹುದು. ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೌಶಲ್ಯ ಅಭಿವೃದ್ಧಿ ಹಾಗೂ ಉದ್ಯೋಗ ಸಂಬಂಧಿ ಯೋಜನೆಗಳ ಮಾಹಿತಿ ನೀಡಲಾಗುವುದು. ನೇರ ಸಂದರ್ಶನದಲ್ಲಿ ಅಭ್ಯರ್ಥಿಗಳು ಭಾಗವಹಿಸಲು ಹೆಚ್ಚಿನ ಮಾಹಿತಿಗಾಗಿ 08182 255293, 88618 90866, https://www.kaushalkar.com ಸಂಪರ್ಕಿಸಬಹುದಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...