
ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿನ ಖಾಲಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಆರ್ಥಿಕ ಇಲಾಖೆ ಒಪ್ಪಿಗೆ ಸೂಚಿಸಿದೆ. ಕೊರೋನಾ ಕಾರಣದಿಂದಾಗಿ ಆರ್ಥಿಕ ಸಂಕಷ್ಟ ಎದುರಾದ ಹಿನ್ನೆಲೆಯಲ್ಲಿ 2020 – 21 ನೇ ಸಾಲಿನ ಎಲ್ಲ ನೇರ ನೇಮಕಾತಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ತಡೆಹಿಡಿಯಲಾಗಿತ್ತು.
ಅನುಕಂಪದ ಆಧಾರದ ಮೇಲೆ ನೇಮಕವಾದ ಅಭ್ಯರ್ಥಿಗಳಿಗೆ ಷರತ್ತು ಅನ್ವಯ ನೇಮಕಾತಿ ಆದೇಶ ನೀಡಲು ಒಪ್ಪಿಗೆ ನೀಡಲಾಗಿದೆ. ಲೋಕಸೇವಾ ಆಯೋಗದ ಮೂಲಕ ವಿವಿಧ ಇಲಾಖೆಗಳಿಗೆ ಆಯ್ಕೆಯಾದ ಪ್ರಥಮ ದರ್ಜೆ ಸಹಾಯಕರು, ದ್ವಿತೀಯ ದರ್ಜೆ ಸಹಾಯಕರಿಗೆ ನೇಮಕಾತಿ ಪ್ರಕ್ರಿಯೆ ಮುಂದುವರಿಸಲು ತಿಳಿಸಲಾಗಿದೆ.
ಜೂನ್ 1 ರ ನಂತರ ನೇಮಕಾತಿ ಆದೇಶ ನೀಡುವಂತೆ ತಿಳಿಸಲಾಗಿದ್ದು, ವಿವಿಧ ಇಲಾಖೆಗಳ ಹುದ್ದೆಗಳ ಪ್ರಸ್ತಾವಿತ ನೇಮಕ ಪ್ರಕ್ರಿಯೆ ಪುನರಾರಂಭಕ್ಕೆ ಹಣಕಾಸು ಇಲಾಖೆಯಿಂದ ಒಪ್ಪಿಗೆ ನೀಡಲಾಗಿದೆ ಎಂದು ಹೇಳಲಾಗಿದೆ.