ರಾಷ್ಟ್ರೀಕೃತ ಬ್ಯಾಂಕುಗಳಲ್ಲಿರುವ 4135 ಬ್ಯಾಂಕ್ ಆಫೀಸರ್ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಕೈಗೊಳ್ಳಲಾಗಿದ್ದು, ಇಂದಿನಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದೆ. ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ(IBPS) 4135 ಆಫೀಸರ್ ಮ್ಯಾನೇಜ್ ಮೆಂಟ್ ಹುದ್ದೆಗಳಿಗೆ ನೇಮಕಾತಿ ಕೈಗೊಂಡಿದೆ.
ಯಾವುದೇ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ನವೆಂಬರ್ 10 ಕೊನೆಯ ದಿನವಾಗಿದ್ದು, ವಯೋಮಿತಿ 20 ರಿಂದ 30 ವರ್ಷ ನಿಗದಿಪಡಿಸಲಾಗಿದೆ. ವಿವಿಧ ವರ್ಗದವರಿಗೆ ವಯೋಮಿತಿಯಲ್ಲಿ ಸಡಿಲಿಕೆ ಇದೆ.
ಹಿಂದಿ ಮತ್ತು ಇಂಗ್ಲೀಷ್ ಭಾಷೆಯಲ್ಲಿ ಮಾತ್ರ ಲಿಖಿತ ಪರೀಕ್ಷೆ ನಡೆಯಲಿದೆ. ಕೆನರಾ ಬ್ಯಾಂಕ್ 650, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 912, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ 620 ಹುದ್ದೆಗಳು ಸೇರಿದಂತೆ 11 ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಹುದ್ದೆಗಳಿಗೆ ನೇಮಕಾತಿ ನಡೆಯಲಿದೆ. ರಾಜ್ಯದ 12 ಜಿಲ್ಲಾ ಕೇಂದ್ರಗಳಲ್ಲಿ ಪೂರ್ವಭಾವಿ ಪರೀಕ್ಷೆ, 3 ಕೇಂದ್ರಗಳಲ್ಲಿ ಮುಖ್ಯ ಪರೀಕ್ಷೆ ನಡೆಯಲಿದೆ. ಅರ್ಜಿ ಸಲ್ಲಿಕೆ ಮತ್ತು ವಿವರಗಳಿಗಾಗಿ www.ibps.in ಗಮನಿಸಬಹುದಾಗಿದೆ.