ಬೆಂಗಳೂರು: ಪ್ರತಿಭಾವಂತ ಕ್ರೀಡಾಪಟುಗಳಿಗೆ ಉದ್ಯೋಗ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗಿದೆ. ಪೊಲೀಸ್ ಇಲಾಖೆಯಿಂದ ಕ್ರೀಡಾಪಟುಗಳಿಗೆ ಸಿಹಿಸುದ್ದಿ ನೀಡಲಾಗಿದ್ದು ಇಲಾಖೆಯ ಎಲ್ಲಾ ನೇಮಕಾತಿಗಳಲ್ಲಿ ಕ್ರೀಡಾಪಟುಗಳಿಗೆ ಶೇಕಡ 2 ರಷ್ಟು ಮೀಸಲಾತಿ ನೀಡಲಾಗುವುದು.
ಅರಣ್ಯ ಇಲಾಖೆಯಲ್ಲಿ ಮಾತ್ರ ಇದುವರೆಗೆ ಕೆಲವು ಹುದ್ದೆಗಳ ನೇಮಕಾತಿಯಲ್ಲಿ ಕ್ರೀಡಾಪಟುಗಳಿಗೆ ಮೀಸಲಾತಿ ನೀಡುತ್ತಿದ್ದು ಪೊಲೀಸ್ ಇಲಾಖೆ ಎಲ್ಲಾ ನೇಮಕಾತಿಗಳಲ್ಲಿ ಶೇಕಡ ಎರಡರಷ್ಟು ಮೀಸಲಾತಿ ನೀಡಲಾಗುತ್ತದೆ. ಅಥ್ಲೆಟಿಕ್ಸ್, ಆರ್ಚರಿ, ಬಾಸ್ಕೆಟ್ ಬಾಲ್, ಬಾಕ್ಸಿಂಗ್, ಸೈಕ್ಲಿಂಗ್ ಸೇರಿದಂತೆ 20 ಕ್ರೀಡೆಗಳ ಪಟ್ಟಿ ಮಾಡಲಾಗಿದೆ. ಇದರಲ್ಲಿ ಕ್ರಿಕೆಟ್ ಗೆ ಅವಕಾಶವಿಲ್ಲ.
ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ಹುದ್ದೆಗೆ 46 ಮತ್ತು ಅದಕ್ಕಿಂತ ಹೆಚ್ಚು ಅಂಕ ಪಡೆದಿರಬೇಕು. ಸಬ್ಇನ್ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗೆ 50 ಅಥವಾ ಅದಕ್ಕಿಂತ ಹೆಚ್ಚು ಅಂಕ, ಡಿವೈಎಸ್ಪಿ ಬುದ್ಧಿಗೆ 55 ಅಥವಾ ಅದಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಕಾಮನ್ವೆಲ್ತ್ ಗೇಮ್ಸ್, ಏಷಿಯನ್ ಗೇಮ್ಸ್, ಒಲಿಂಪಿಕ್ಸ್ ಮೊದಲಾದ ಚಾಂಪಿಯನ್ ಶಿಪ್ ನಲ್ಲಿ ಪದಕ ಪಡೆದವರು ಮಾತ್ರ ಡಿವೈಎಸ್ಪಿ ಹುದ್ದೆ ಪಡೆಯಬಹುದಾಗಿದೆ. ಕ್ರೀಡಾಪಟುಗಳಿಗೆ ಮೀಸಲು ಕಲ್ಪಿಸಲು ಪೊಲೀಸ್ ಇಲಾಖೆಯಿಂದ ವಿಶೇಷ ನಿಯಮ ರೂಪಿಸಲಾಗಿದೆ.