ರಾಯಚೂರು: ಇಲ್ಲಿಯ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ವಿನಿಮಯ ಇಲಾಖೆಯ ವತಿಯಿಂದ ನಗರದಲ್ಲಿ ಇದೇ ಮೇ 5 ರಂದು ನೇರ ಸಂದರ್ಶನ ಹಮ್ಮಿಕೊಳ್ಳಲಾಗಿದ್ದು, ನೇರ ಸಂದರ್ಶನದಲ್ಲಿ ವಿವಿಧ ಕಂಪನಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಹ ಅಭ್ಯಥಿಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಈ ಸಂದರ್ಶನದಲ್ಲಿ 2 ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ಆಸಕ್ತರು ಭಾಗವಹಿಸಬಹುದಾಗಿದೆ. ನೇರ ಸಂದರ್ಶನ ನಗರದ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ನಡೆಸಲಾಗುತ್ತದೆ.
ಅರ್ಹತೆಗಳು:
ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ, ಪಿ.ಯು.ಸಿ. ಹಾಗೂ ಎಲ್ಲಾ ಪದವೀಧರ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. 18 ರಿಂದ 35 ವರ್ಷಗಳವರೆಗಿನ ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ. ಉದ್ಯೋಗವಕಾಶಕ್ಕಾಗಿ ತಮ್ಮ ವಿದ್ಯಾರ್ಹತೆಯ ಅಂಕ ಪಟ್ಟಿಗಳ ಜೆರಾಕ್ಸ್ ಪ್ರತಿಗಳು, ಬಯೋಡಾಟಾ, ಆಧಾರ್ ಕಾರ್ಡ್ ಪ್ರತಿ ಹಾಗೂ ಭಾವಚಿತ್ರಗಳೊಂದಿಗೆ ಭಾಗವಹಿಸಬಹುದಾಗಿದೆ. ನೇರ ಸಂದರ್ಶನದಲ್ಲಿ ಭಾಗವಹಿಸಲು ಯಾವುದೇ ಶುಲ್ಕವಿರುವುದಿಲ್ಲ,
ಬದಲಾಗಿ ತಮ್ಮ ಸ್ವಂತ ಖರ್ಚಿನಲ್ಲಿ ಈ ಸಂದರ್ಶನಕ್ಕೆ ಹಾಜರಾಗಬಹುದಾಗಿರುತ್ತದೆ. ಉದ್ಯೋಗ ನೋಂದಣಿ ಮಾಡಿಸುವ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಮೂಲ ಅಂಕಪಟ್ಟಿಗಳು, ವರ್ಗಾವಣೆ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಮತ್ತು ಜೆರಾಕ್ಸ್ ಪ್ರತಿಯನ್ನು ತರಬೇಕಾಗಿರುತ್ತದೆ. ಅಲ್ಲದೆ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿಗಳು ಕಡ್ಡಾಯವಾಗಿ ಕೋವಿಡ್-19ರ ಸುರಕ್ಷತಾ ಕ್ರಮಗಳನ್ನು ಕಡ್ಡಾಯವಾಗಿ ಅನುಸರಿಸಬೇಕಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08532-231684, 7795195171, 8296483501, 7411796987ಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.