ಬೆಂಗಳೂರು : ಕನ್ನಡಿಗರಿಗೆ ಖಾಸಗಿ ವಲಯದಲ್ಲಿ ಉದ್ಯೋಗ ಮೀಸಲಾತಿ ನೀಡುವ ವಿಧೇಯಕಕ್ಕೆ ರಾಜ್ಯ ಸರ್ಕಾರ ತಾತ್ಕಾಲಿಕ ತಡೆ ನೀಡಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿದ ಸಿಎಂ ಸಿದ್ದರಾಮಯ್ಯ ”ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಜಾರಿಗೆ ತರಲು ಉದ್ದೇಶಿಸಿದ್ದ ವಿಧೇಯಕವು ಇನ್ನೂ ಸಿದ್ಧತೆಯ ಹಂತದಲ್ಲಿದೆ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಸಮಗ್ರವಾಗಿ ಚರ್ಚಿಸಿ ಅಂತಿಮ ನಿರ್ಣಯ ಕೈಗೊಳ್ಳಲಾಗುವುದು” ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದ ಖಾಸಗಿ ಕೈಗಾರಿಕೆಗಳು ಹಾಗೂ ಇತರೆ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಆಡಳಿತಾತ್ಮಕ ಹುದ್ದೆಗಳಿಗೆ ಶೇ.50 ಹಾಗೂ ಆಡಳಿತಾತ್ಮಕವಲ್ಲದ ಹುದ್ದೆಗಳಿಗೆ ಶೇ.75 ಮೀಸಲಾತಿ ನಿಗದಿಪಡಿಸುವ ವಿಧೇಯಕಕ್ಕೆ ಸೋಮವಾರ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಈ ಬೆನ್ನಲ್ಲೇ ಸರ್ಕಾರ ಯೂ ಟರ್ನ್ ಹೊಡೆದಿದೆ.