ಬೆಂಗಳೂರು: ರಾಜ್ಯದ ಖಾಸಗಿ ಕಂಪನಿಗಳಲ್ಲಿ ಸ್ಥಳೀಯರಿಗೆ ಮೀಸಲಾತಿ ನೀಡುವ ಮಸೂದೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಿರುವುದಕ್ಕೆ ದೇಶದ ಎರಡನೇ ಅತಿ ದೊಡ್ಡ ಸಾಫ್ಟ್ವೇರ್ ದಿಗ್ಗಜ ಇನ್ಫೋಸಿಸ್ ಬೆಂಬಲಿಸಿದೆ.
ಸರ್ಕಾರದ ಯಾವ ಕಾನೂನು ನಿಯಮಗಳನ್ನು ಹೇಳಲಿದೆಯೋ ಅದರ ಪರವಾಗಿ ನಾವು ನಿಲ್ಲಲಿದ್ದೇವೆ ಎಂದು ಇನ್ಫೋಸಿಸ್ ಸಿಇಒ ಸಲೀಲ್ ಪಾರೆಖ್ ತಿಳಿಸಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದ ಎಲ್ಲಾ ನಿಯಮಗಳೊಂದಿಗೆ ಕೆಲಸ ಮಾಡುತ್ತೇವೆ. ಯಾವ ಕಾನೂನು ಮತ್ತು ಮಾರ್ಗಸೂಚಿಗಳನ್ನು ತರುತ್ತಾರೋ ಅದಕ್ಕೆ ನಾವು ಬೆಂಬಲ ಸೂಚಿಸುತ್ತೇವೆ ಎಂದು ತಿಳಿಸಿದ್ದಾರೆ.
ನಾವು ಕಾನೂನು ಪರ ಎಂದು ಹೇಳುವ ಮೂಲಕ ಉದ್ಯೋಗ ಮೀಸಲು ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಬೆಂಬಲ ನೀಡಿದ್ದಾರೆ.