ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಕಚೇರಿ ವತಿಯಿಂದ ಸೆಪ್ಟೆಂಬರ್ 14 ರ ಬೆಳಿಗ್ಗೆ 10 ಗಂಟೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, 2ನೇ ಕ್ರಾಸ್, ಪಂಪಾ ನಗರ, ಗುತ್ಯಪ್ಪ ಕಾಲೋನಿ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿ ಮಿನಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಈ ಉದ್ಯೋಗ ಮೇಳದಲ್ಲಿ ಸುಮಾರು 5 ಕ್ಕೂ ಹೆಚ್ಚು ಪ್ರತಿಷ್ಟಿತ ಖಾಸಗಿ ಕಂಪೆನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪ್ಲೊಮಾ ಹಾಗೂ ಯಾವುದೇ ಪದವಿಯಲ್ಲಿ ತೇರ್ಗಡೆಯಾದ 18 ರಿಂದ 35 ವಯೋಮಾನದೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡೇಟಾ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ಸಂದರ್ಶನದಲ್ಲಿ ಭಾಗವಹಿಸಬಹುದು.
ಉದ್ಯೋಗ ಮೇಳದಲ್ಲಿ ಭಾಗವಹಿಸಲು ಪ್ರವೇಶ ಉಚಿತವಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಶಿವಮೊಗ್ಗ ಇಲ್ಲಿಗೆ ಖುದ್ದಾಗಿ ಅಥವಾ ದೂರವಾಣಿ ಸಂಖ್ಯೆ: 08182-255294, ಮೊ.ಸಂ: 9535312531, 9482023412 ನ್ನು ಸಂಪರ್ಕಿಸಬಹುದೆಂದು ಉದ್ಯೋಗಾಧಿಕಾರಿ ತಿಳಿಸಿದ್ದಾರೆ.