ಶಿವಮೊಗ್ಗ: ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯು ಫೆಬ್ರವರಿ 20 ರಂದು ಬೆಳಿಗ್ಗೆ 10 ಗಂಟೆಗೆ ಸಾಗರ ರಸ್ತೆ ಗುತ್ಯಪ್ಪ ಕಾಲೋನಿ-ಪಂಪಾನಗರದ 2ನೇ ತಿರುವಿನಲ್ಲಿರುವ ಉದ್ಯೋಗ ವಿನಿಮಯ ಕಚೇರಿಯಲ್ಲಿ ಎನ್.ಸಿ.ಎಸ್.ಪಿ ಯೋಜನೆಯಡಿ ಉದ್ಯೋಗ ಮೇಳವನ್ನು ಏರ್ಪಡಿಸಿದೆ.
ಈ ಉದ್ಯೋಗ ಮೇಳದಲ್ಲಿ 8 ನೇ ತರಗತಿ, ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐ.ಟಿ.ಐ., ಡಿಪ್ಲೋಮಾ, ಯಾವುದೇ ಪದವಿ ಮತ್ತು ಸ್ನಾತಕೋತ್ತರ ಪದವಿ ಹೊಂದಿದ 18 ರಿಂದ 35 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ತಮ್ಮ ಬಯೋಡಾಟ ಮತ್ತು ಆಧಾರ್ ಕಾರ್ಡ್ ಪ್ರತಿಯೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08182-255294, ಮೊ.8861890866, 9980184267/ 9535312531/9482023412 ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ತಿಳಿಸಿದ್ದಾರೆ.