ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಧೀನದಲ್ಲಿರುವ ಈಜುಕೊಳದ ಕೇರ್ಟೇಕರ್ ಹುದ್ದೆಗೆ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಪುರುಷ ಅಭ್ಯರ್ಥಿಯಾಗಿರಬೇಕು. ಈಜು ಕಡ್ಡಾಯವಾಗಿ ಬರತಕ್ಕದ್ದು. ಆಯ್ಕೆ ಪ್ರಕ್ರಿಯೆಗೆ ಬರುವಂತಹ ಅಭ್ಯರ್ಥಿಗಳು ಈಜು ತರಬೇತಿಯ ಪ್ರಮಾಣ ಪತ್ರ ತರಬೇಕು. ಆಯ್ಕೆ ಪ್ರಕ್ರಿಯೆಗೆ ಬರುವಂತಹ ಅಭ್ಯರ್ಥಿಗಳು ಈಜು ಸಮವಸ್ತ್ರವನ್ನು ತರಬೇಕು.
ಆಸಕ್ತ ಅಭ್ಯರ್ಥಿಗಳು ಆಗಸ್ಟ್, 17 ರಂದು ತಮ್ಮ ದಾಖಲಾತಿಗಳನ್ನು ತರತಕ್ಕದ್ದು. ಹೆಚ್ಚಿನ ಮಾಹಿತಿಗೆ ದೂ.ಸಂ.08272-220986 ಮತ್ತು 9980887499 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಅವರು ತಿಳಿಸಿದ್ದಾರೆ.