alex Certify ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೆಲಸದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್: 5 ಸಾವಿರಕ್ಕೂ ಅಧಿಕ ಹುದ್ದೆಗಳಿಗೆ ನೇಮಕಾತಿ

ಕೊಪ್ಪಳ: ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆ.12 ರಂದು ಕಲಬುರಗಿಯ ದೊಡ್ಡಪ್ಪ ಅಪ್ಪ ತಾಂತ್ರಿಕ ಮಹಾವಿದ್ಯಾಲಯ ಐವನ್-ಎ-ಶಾಹಿ ಶಂಭೋಜಿಯಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.

ಫೆ. 12 ರಂದು ಬೆಳಿಗ್ಗೆ 9 ಗಂಟೆಯಿಂದ ಸಾಯಂಕಾಲ 6 ಗಂಟೆಯವರೆಗೆ ಉದ್ಯೋಗ ಮೇಳ ನಡೆಯಲಿದೆ. ಈ ಮೇಳದಲ್ಲಿ ಪ್ರತಿಷ್ಠಿತ ಕಂಪನಿಗಳು ಸುಮಾರು 5000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಿದ್ದು, ಬಿ.ಇ, ಬಿಕಾಂ, ಬಿ.ಎಸ್‌ಸಿ, ಬಿಎ, ಬಿಸಿಎ, ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಡಿಪ್ಲೊಮಾ ಹಾಗೂ ಐಟಿಐ ವಿದ್ಯಾರ್ಹತೆಯನ್ನು ಹೊಂದಿದ ಅಭ್ಯರ್ಥಿಗಳು ವಿದ್ಯಾರ್ಹತೆಯ ಅಂಕಪಟ್ಟಿಯ ನಕಲು ಪ್ರತಿ, ಇತ್ತೀಚಿನ 2 ಭಾವಚಿತ್ರ, ಆಧಾರ್ ಕಾರ್ಡ್ ಹಾಗೂ ರೆಸ್ಯುಮ್‌ನ 5 ಪ್ರತಿಗಳೊಂದಿಗೆ ಮೇಳದಲ್ಲಿ ಭಾಗವಹಿಸಬಹುದು.

ಆಸಕ್ತ ಉದ್ಯೋಗಾಕಾಂಕ್ಷಿಗಳು ವೆಬ್‌ಸೈಟ್ https://skillconnect.kaushalkar.com/app/gulbarga-jobfair       ಲಿಂಕ್‌ ಮೂಲ ತಮ್ಮ ಸ್ವ-ವಿವರಗಳ ಮಾಹಿತಿಯನ್ನು ಭರ್ತಿ ಮಾಡಿ ಹೆಸರು ನೋಂದಾಯಿಸಿಕೊಳ್ಳಬಹುದು. ಅಭ್ಯರ್ಥಿಗಳು ತಮ್ಮ ರೆಸ್ಯುಮ್‌ಗಳನ್ನು ಇ-ಮೇಲ್:  ksdc.recruitment@gmail.com ವಿಳಾಸಕ್ಕೆ ಕಳುಹಿಸಬಹುದು. ಹೆಚ್ಚಿನ ಮಾಹಿತಿಗಾಗಿ ಮೊ.ಸಂ: 8277895931 ಗೆ ಸಂಪರ್ಕಿಸಬಹುದೆಂದು ಕೊಪ್ಪಳ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ತಿಳಿಸಿದ್ದಾರೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...