ರಾಜಸ್ಥಾನದ ಜೋಧಪುರದ ಹೋಟೆಲ್ ಒಂದರಲ್ಲಿ ತಂಗಿದ್ದ ರೂಪದರ್ಶಿಯೊಬ್ಬರು ಆರನೇ ಅಂತಸ್ತಿನಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು. ಇದಕ್ಕೂ ಮುನ್ನ ಅವರು ತಮ್ಮ ತಂದೆಗೆ ಕರೆ ಮಾಡಿ ಮಾತನಾಡಿದ್ದಾರೆಂದು ಹೇಳಲಾಗಿದ್ದು, ಇದೀಗ ಈ ಆತ್ಮಹತ್ಯೆ ಪ್ರಕರಣದ ಹಿಂದಿನ ಸ್ಪೋಟಕ ಮಾಹಿತಿ ಬಹಿರಂಗವಾಗಿದೆ.
ಈ ಖ್ಯಾತ ಮಾಡೆಲ್ ರನ್ನು ಅಕ್ಷತ್ ಮತ್ತು ದೀಪಾಲಿ ಎಂಬವರು ಬಳಸಿಕೊಂಡು ರಾಜಸ್ಥಾನದ ಅಶೋಕ್ ಗೆಹ್ಲೋಟ್ ಸಂಪುಟದ ಪ್ರಭಾವಿ ಸಚಿವರೊಬ್ಬರನ್ನು ಹನಿಟ್ರ್ಯಾಪ್ ಖೆಡ್ಡಾಕ್ಕೆ ಕೆಡವಲು ಯತ್ನಿಸಿದ್ದರೆಂದು ಹೇಳಲಾಗಿದೆ. ಈ ಕಾರ್ಯ ಮಾಡಲು ಇಷ್ಟವಿಲ್ಲದಿದ್ದರೂ ಇವರುಗಳ ಒತ್ತಡಕ್ಕೆ ಮಣಿದಿದ್ದ ಮಾಡೆಲ್ ಬಳಿಕ ಅಲ್ಲಿಂದ ತಪ್ಪಿಸಿಕೊಂಡು ಹೋಟೆಲ್ ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದರು ಎಂದು ಹೇಳಲಾಗಿದೆ.
SHOCKING NEWS: ಆಸ್ತಿಗಾಗಿ ತಂಗಿಗೆ ಬೆಂಕಿ ಹಚ್ಚಿ ಕೊಂದು ಆಸ್ಪತ್ರೆ ಸೇರಿದ ಅಕ್ಕ
ಅಕ್ಷತ್ ಮತ್ತು ದೀಪಾಲಿ ಅವರ ಕೆಲಸವನ್ನು ಸಚಿವರು ಮಾಡಿ ಕೊಡಲು ನಿರಾಕರಿಸಿದ ಹಿನ್ನೆಲೆಯಲ್ಲಿ ಅವರನ್ನು ಹನಿಟ್ರಾಪ್ ಖೆಡ್ಡಾಕ್ಕೆ ಕೆಡವಲು ಯತ್ನಿಸಿದ್ದರು ಎಂದು ಹೇಳಲಾಗಿದೆ. ಇದೀಗ ಆಸ್ಪತ್ರೆಯಲ್ಲಿ ಚೇತರಿಸಿಕೊಂಡಿರುವ ಮಾಡೆಲ್ ನೀಡಿದ ಮಾಹಿತಿ ಆಧರಿಸಿ ಇಬ್ಬರು ದುಷ್ಕರ್ಮಿಗಳನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.