BREAKING: ಶ್ರೀಮಂತರ ಕೈಯಲ್ಲಿ ಅಧಿಕಾರ ಕೇಂದ್ರೀಕೃತ ಸಾಧ್ಯತೆ: ವಿದಾಯ ಭಾಷಣದಲ್ಲಿ ಟ್ರಂಪ್ ನಡೆ ಟೀಕಿಸಿದ ಅಮೆರಿಕ ನಿರ್ಗಮಿತ ಅಧ್ಯಕ್ಷ ಬೈಡನ್

ವಾಷಿಂಗ್ಟನ್: ಅಮೆರಿಕ ನಿರ್ಗಮಿತ ಅಧ್ಯಕ್ಷ ಜೋ ಬಿಡೆನ್ ವಿದಾಯದ ಭಾಷಣ ಮಾಡಿದ್ದಾರೆ. ನಾಲ್ಕು ವರ್ಷದ ಅಧಿಕಾರದ ಅವಧಿಯಲ್ಲಿ ಉತ್ತಮ ಆಡಳಿತ ನೀಡಿದ್ದೇವೆ. ಪ್ರಜಾಪ್ರಭುತ್ವದ ವ್ಯವಸ್ಥೆಗೆ ಧಕ್ಕೆಯಾಗದಂತೆ ಆಡಳಿತ ನಡೆಸಿದ್ದೇವೆ ಎಂದು ಹೇಳಿದ್ದಾರೆ.

ಅಮೆರಿಕದ ಓವೆಲ್ ಕಚೇರಿಯಲ್ಲಿ ನಿರ್ಗಮಿತ ಅಧ್ಯಕ್ಷ ಬೈಡನ್ ಮಾತನಾಡಿ, ಕೆಲವು ಶ್ರೀಮಂತರ ಕೈಯಲ್ಲಿ ಅಧಿಕಾರ ಕೇಂದ್ರೀಕೃತವಾಗುವ ಸಾಧ್ಯತೆ ಇದೆ. ಈ ಬಗ್ಗೆ ಅಮೆರಿಕದ ಜನತೆ ಎಚ್ಚರಿಕೆಯ ನಡೆ ಇಡಬೇಕಿದೆ. ಮಾಧ್ಯಮ ಸ್ವಾತಂತ್ರ್ಯ, ಮೂಲಭೂತ ಹಕ್ಕುಗಳಿಗೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಜಾಪ್ರಭುತ್ವ ವ್ಯವಸ್ಥೆಗೆ ಬೆದರಿಕೆ ಹಾಕುವ ಶಕ್ತಿಗಳ ಬಗ್ಗೆ ಎಚ್ಚರಿಕೆ ವಹಿಸಿರಿ ಎಂದು ಅಮೆರಿಕದ ಓವೆಲ್ ಕಚೇರಿಯಲ್ಲಿ ನಿರ್ಗಮಿತ ಅಧ್ಯಕ್ಷ ಬೈಡನ್ ವಿದಾಯದ ಭಾಷಣದಲ್ಲಿ ಹೇಳಿದ್ದಾರೆ.

ಜನವರಿ 20 ರಂದು ಡೊನಾಲ್ಡ್ ಟ್ರಂಪ್‌ಗೆ ಅಧ್ಯಕ್ಷ ಸ್ಥಾನವನ್ನು ಹಸ್ತಾಂತರಿಸಲಿರುವ ನಿರ್ಗಮಿತ ಅಧ್ಯಕ್ಷ ಜೋ ಬಿಡೆನ್ ತಮುಂದಿನ ನಾಲ್ಕು ವರ್ಷಗಳ ಕಾಲ ಪ್ರಜಾಪ್ರಭುತ್ವ ಸಂಸ್ಥೆಗಳನ್ನು ರಕ್ಷಿಸುವುದು ಮುಖ್ಯ ಎಂದು ಹೇಳುವ ಎಚ್ಚರಿಕೆ ನೀಡಿದ್ದಾರೆ.

ತಮ್ಮ ಭಾಷಣದಲ್ಲಿ ಅವರು, 8 ತಿಂಗಳ ಮಾತುಕತೆಯ ನಂತರ ಇಸ್ರೇಲ್ ಮತ್ತು ಹಮಾಸ್ ನಡುವೆ ಕದನ ವಿರಾಮ ತಲುಪಿದೆ ಎಂದು ತಿಳಿಸಿದ್ದಾರೆ.

ಹವಾಮಾನ ಬದಲಾವಣೆ ನೀತಿಗಳನ್ನು ಪ್ರಶ್ನಿಸುವ ನಿಯೋಜಿತ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಪ್ರತಿಜ್ಞೆಯನ್ನು ಬೈಡನ್ ಟೀಕಿಸಿದ್ದು, ಹವಾಮಾನ ಬಿಕ್ಕಟ್ಟನ್ನು ನಿಭಾಯಿಸಲು ನಾವು ತೆಗೆದುಕೊಂಡ ಕ್ರಮಗಳನ್ನು ತೆಗೆದುಹಾಕಲು ಪ್ರಬಲ ಶಕ್ತಿಗಳು ತಮ್ಮ ಅನಿಯಂತ್ರಿತ ಪ್ರಭಾವವನ್ನು ಬಳಸಲು ಬಯಸುತ್ತವೆ ಎಂದು ಟೀಕಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read