ವಾಷಿಂಗ್ಟನ್: ಅಮೆರಿಕದಲ್ಲಿ ನಡೆದ ಅಚ್ಚರಿಯ ದಿಢೀರ್ ಬೆಳವಣಿಗೆಯಲ್ಲಿ ಹಾಲಿ ಅಧ್ಯಕ್ಷ ಜೋ ಬೈಡೆನ್ ಅವರು ಮುಂಬರುವ ಅಧ್ಯಕ್ಷೀಯ ಚುನಾವಣಾ ಸ್ಪರ್ಧೆಯಿಂದ ಹಿಂದೆ ಸರಿದಿದ್ದಾರೆ.
81 ವರ್ಷದ ಜೋ ಬೈಡೆನ್ ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ಹಾಲಿ ಉಪಾಧ್ಯಕ್ಷರಾಗಿರುವ ಭಾರತೀಯ ಮೂಲದ ಕಮಲ ಹ್ಯಾರಿಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೀಯ ಅಭ್ಯರ್ಥಿಯಾಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ಹಲವು ದಿನಗಳಿಂದ ವಯೋಸಹಜ ಸಮಸ್ಯೆಗಳಿಗೆ ತುತ್ತಾಗಿರುವ ಬೈಡೆನ್ ಅವರ ಸಾರ್ವಜನಿಕ ಸಮಾರಂಭಗಳಲ್ಲಿನ ಇತ್ತೀಚಿನ ವರ್ತನೆ ಭಾರಿ ಟೀಕೆಗೆ ಗುರಿಯಾಗಿತ್ತು.
ಅಲ್ಲದೇ, ಅವರ ಕುಟುಂಬ ಸದಸ್ಯರು, ಆಪ್ತರು ಕೂಡ ಸ್ಪರ್ಧೆಯಿಂದ ಹಿಂದೆ ಸರಿಯುವ ಬಗ್ಗೆ ಸಲಹೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ಅಧ್ಯಕ್ಷೀಯ ಚುನಾವಣೆ ಸ್ಪರ್ಧೆಯಿಂದ ಹಿಂದೆ ಸರಿಯುವುದಾಗಿ ಬೈಡೆನ್ ಘೋಷಿಸಿದ್ದಾರೆ. ಅವರ ಬದಲಾಗಿ ಡೆಮಾಕ್ರಟಿಕ್ ಪಕ್ಷದಿಂದ ಕಮಲಾ ಹ್ಯಾರಿಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿಯಾಗಲಿದ್ದಾರೆ.