ವಾಷಿಂಗ್ಟನ್: ಅಮೆರಿಕ ಅಧ್ಯಕ್ಷರಾಗಿ ಜೋ ಬೈಡೆನ್, ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಅವರು ಅಧಿಕಾರ ವಹಿಸಿಕೊಳ್ಳುವ ಮೊದಲೇ ಕೆಲಸ ಆರಂಭಿಸಿದ್ದಾರೆ.
ಅಮೆರಿಕದಲ್ಲಿ ತುರ್ತಾಗಿ ಆಗಬೇಕಿರುವ ಕೆಲಸಗಳ ಕುರಿತಾಗಿ ಮಾಹಿತಿ ಪಡೆದುಕೊಂಡ ಅವರು, ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಅಮೆರಿಕದಲ್ಲಿ ಕೊರೋನಾ ಸಾಂಕ್ರಾಮಿಕ ರೋಗದಿಂದ ಪರಿಸ್ಥಿತಿ ಹದಗೆಟ್ಟಿದೆ. ಆರೋಗ್ಯ ಮತ್ತು ಆರ್ಥಿಕತೆಗೆ ಕಾಯಕಲ್ಪ ನೀಡಲು ತುರ್ತು ಕ್ರಮ ಕೈಗೊಳ್ಳುವ ಬಗ್ಗೆ ಅವರು ಸಮಾಲೋಚನೆ ನಡೆಸಿದ್ದಾರೆ.
ಕೆಲಸ ಶುರು ಮಾಡಲು ಕಾಯುವ ಅಗತ್ಯವಿಲ್ಲವೆಂದು ಹೇಳಿದ ಬೈಡೆನ್, ಉಪಾಧ್ಯಕ್ಷರಾಗಿ ಆಯ್ಕೆಯಾಗಿರುವ ಕಮಲಾ ಹ್ಯಾರಿಸ್ ಹಾಗೂ ವಿವಿಧ ಕ್ಷೇತ್ರಗಳ ತಜ್ಞರೊಂದಿಗೆ ಸರಣಿ ಸಭೆ ನಡೆಸಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಸೂಚನೆ ನೀಡಿದ್ದಾರೆ.