ಶಿವಮೊಗ್ಗ: ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಿಸಲು ಬರುವ ಪ್ರವಾಸಿಗರಿಗೆ ಹೆಚ್ಚಿನ ಶುಲ್ಕದ ಬರೆ ಬೀಳಲಿದೆ. ಜೋಗ ನಿರ್ವಹಣಾ ಪ್ರಾಧಿಕಾರ ವತಿಯಿಂದ ಸುಮಾರು 183.7 ಕೋಟಿ ರೂ. ವೆಚ್ಚದಲ್ಲಿ ಜಲಪಾತದ ಆವರಣವನ್ನು ಅಂತರಾಷ್ಟ್ರೀಯ ಮಟ್ಟದ ಪ್ರವಾಸಿ ತಾಣವನ್ನಾಗಿ ರೂಪಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ಮೂಲ ಸೌಕರ್ಯ ಪೂರ್ಣವಾಗುವ ಮೊದಲೇ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ.
ಜಲಪಾತ ವೀಕ್ಷಣೆಗೆ ಈ ಹಿಂದೆ ಬಸ್ ಗೆ 150ರೂ. ಇದ್ದ ಪ್ರವೇಶ ಶುಲ್ಕವನ್ನು 200 ರೂ.ಗೆ ಹೆಚ್ಚಳ ಮಾಡಲಾಗಿದೆ. ಟಿಟಿ, ಮಿನಿ ಬಸ್ ದರ 100 ರಿಂದ 150 ರೂ. ಗೆ ಹೆಚ್ಚಳವಾಗಿದೆ. ಆಟೋರಿಕ್ಷಾ 30 ರಿಂದ 40ರೂ., ಬೈಕ್ ಗೆ 20 ರಿಂದ 30 ರೂ. ಗೆ ಶುಲ್ಕ ಹೆಚ್ಚಳ ಮಾಡಲಾಗಿದೆ.
ಪ್ರವಾಸಿಗರಿಗೆ 10ರೂ ಪ್ರವೇಶ ದರವಿದ್ದು, ಅದನ್ನು 20 ರೂ. ಗೆ ಹೆಚ್ಚಳ ಮಾಡಲಾಗಿದೆ. 6-16 ವರ್ಷದೊಳಗಿನ ಮಕ್ಕಳಿಗೆ 10 ರೂ. ಶುಲ್ಕ ನಿಗದಿ ಮಾಡಲಾಗಿದೆ. ಕ್ಯಾಮೆರಾ ತೆಗೆದುಕೊಂಡು ಹೋದರೆ 100 ರೂ., ಡ್ರೋನ್ ಗೆ 500 ರೂಪಾಯಿ ಶುಲ್ಕ ಪಾವತಿಸಬೇಕಾಗಿದೆ. ಇದಕ್ಕೆ ಪ್ರವಾಸಿಗರು ಮತ್ತು ಸ್ಥಳೀಯರಿಂದ ಆಕ್ರೋಶ ವ್ಯಕ್ತವಾಗಿದೆ.