ಕೊರೊನಾಕ್ಕೆ ಲಸಿಕೆ ಪ್ರಮುಖ ಅಸ್ತ್ರ. ದೇಶದಲ್ಲಿ ಮೂರು ಕೊರೊನಾ ಲಸಿಕೆ ಈಗಾಗಲೇ ಇದೆ. ಈಗ ಇನ್ನೊಂದು ಕೊರೊನಾ ಲಸಿಕೆ ಭಾರತಕ್ಕೆ ಬರ್ತಿದೆ. ಜಾನ್ಸನ್ ಆಂಡ್ ಜಾನ್ಸನ್ ಕಂಪನಿಯ ಏಕ ಡೋಸ್ ಲಸಿಕೆಯನ್ನು ಭಾರತದಲ್ಲಿ ತುರ್ತು ಬಳಕೆಗೆ ಅನುಮೋದಿಸಲಾಗಿದೆ. ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಈ ಮಾಹಿತಿ ನೀಡಿದ್ದಾರೆ.
ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ಜಾನ್ಸನ್ ಆಂಡ್ ಜಾನ್ಸನ್ ಕಂಪನಿಯ ಸಿಂಗಲ್ ಡೋಸ್ ಕೊರೊನಾ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಲಾಗಿದೆ. ಭಾರತದಲ್ಲಿ ಸಿಂಗಲ್ ಡೋಸ್ ಕೊರೊನಾ ಲಸಿಕೆಯ ತುರ್ತು ಬಳಕೆಗಾಗಿ ಜಾನ್ಸನ್ ಆಂಡ್ ಜಾನ್ಸನ್ ಕಂಪನಿ ಶುಕ್ರವಾರ ಕೇಂದ್ರ ಸರ್ಕಾರದಿಂದ ಅನುಮತಿ ಕೋರಿತ್ತು.
ಜಾನ್ಸನ್ ಆಂಡ್ ಜಾನ್ಸನ್ ಕಂಪನಿಯ ಪ್ರಕಾರ, ಭಾರತದಲ್ಲಿ ಏಕ ಡೋಸ್ ಲಸಿಕೆಯ ತುರ್ತು ಬಳಕೆಗೆ ಅನುಮೋದನೆ ಒಂದು ಮೈಲಿಗಲ್ಲು ಎಂದು ಸಾಬೀತಾಗಲಿದೆ. ಇದು ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸಲಿದೆ. ಜಾನ್ಸನ್ ಆಂಡ್ ಜಾನ್ಸನ್ ಕಂಪನಿ ತನ್ನ ಕೊರೊನಾ ಲಸಿಕೆ, ಶೇಕಡಾ 85ರಷ್ಟು ಪರಿಣಾಮಕಾರಿ ಎಂದಿದೆ.