
ಬೆಂಗಳೂರು: ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ 2024-25ನೇ ಸಾಲಿಗೆ ಪರಿಶಿಷ್ಟ ಜಾತಿ ಅಭ್ಯರ್ಥಿಗಳಿಗೆ Police Constable ಪೂರ್ವ-ನೇಮಕಾತಿ ತರಬೇತಿ ನೀಡುವ ಸಂಬಂಧ ರಾಜ್ಯದ 4 ಕಂದಾಯ ವಿಭಾಗಗಳಲ್ಲಿ ಪ್ರತ್ಯೇಕವಾಗಿ 60 ದಿನಗಳ ವಸತಿಯುತ ತರಬೇತಿ ನೀಡಲಾಗುವುದು.
ವಸತಿಯುತ ಪೊಲೀಸ್ ಕಾನ್ ಸ್ಟೇಬಲ್ ಪೂರ್ವ ನೇಮಕಾತಿ ತರಬೇತಿ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ ಮತ್ತು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಸೇರಿ ಈ ಕುರಿತ ಮಾಹಿತಿ ಈ ಕೆಳಗಿನಂತಿದೆ.

