ನವದೆಹಲಿ: ದೆಹಲಿ ಪೊಲೀಸರು ಮೊಹಮ್ಮದ್ ಜುಬೇರ್ ರನ್ನು ಬಂಧಿಸಿದ್ದಾರೆ. ಆಲ್ಟ್ ನ್ಯೂಸ್ ಸಹ-ಸಂಸ್ಥಾಪಕ ಮೊಹಮ್ಮದ್ ಜುಬೇರ್ ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನೆ ಆರೋಪದಡಿ ಬಂಧಿತರಾಗಿದ್ದಾರೆ.
ಜುಬೇರ್ ಹಿಂದೂ ವಿರೋಧಿ ಪೋಸ್ಟ್ ಹಾಕಿದ ಆರೋಪ ಕೇಳಿ ಬಂದಿದೆ. ಕೋಮು ಭಾವನೆ ಕೆರಳಿಸುವಂತಹ ಪೋಸ್ಟ್ ಹಾಕಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ. ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಲ್ಲಿ ದೆಹಲಿ ಪೊಲೀಸರು ಐಪಿಸಿ ಸೆಕ್ಷನ್ 153/295 ಅಡಿಯಲ್ಲಿ ಬಂಧಿಸಿದ್ದಾರೆ.