ವಿಜಯಪುರ: ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಸ್ವಾಮೀಜಿ ಅಗಲಿಕೆ ಹಿನ್ನೆಲೆಯಲ್ಲಿ ವಿಜಯಪುರದಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ರಾಜ್ಯ ಪತ್ರಕರ್ತರ ಸಮ್ಮೇಳನ ಮುಂದೂಡಲಾಗಿದೆ.
ಜನವರಿ 9, 10 ರಂದು ವಿಜಯಪುರದಲ್ಲಿ 37ನೇ ರಾಜ್ಯ ಪತ್ರಕರ್ತರ ಸಮ್ಮೇಳನ ಹಮ್ಮಿಕೊಳ್ಳಲಾಗಿತ್ತು. ಸಿದ್ದೇಶ್ವರ ಸ್ವಾಮೀಜಿ ಅಗಲಿಕೆ ಕಾರಣಕ್ಕೆ ಸಮ್ಮೇಳನ ನಡೆಸುವುದು ಕಷ್ಟವಾಗುವುದರಿಂದ ಸಮ್ಮೇಳನ ಮುಂದೂಡುವಂತೆ ಆತಿತ್ಯ ವಹಿಸಿರುವ ವಿಜಯಪುರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಮನವಿ ಮಾಡಿಕೊಂಡಿತ್ತು.
ಈ ಹಿನ್ನಲೆಯಲ್ಲಿ ಸಮ್ಮೇಳನ ಮುಂದೂಡಲಾಗಿದ್ದು, ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಿ ಸಮ್ಮೇಳನದ ಮುಂದಿನ ದಿನಾಂಕವನ್ನು ಶೀಘ್ರವಾಗಿ ತಿಳಿಸಲಾಗುವುದು ಎಂದು ಹೇಳಲಾಗಿದೆ.
ಜನವರಿ 9 ರಂದು ವಿಜಯಪುರದ ಬದಲಿಗೆ ಹಾಸನದಲ್ಲಿ ರಾಜ್ಯ ಕಾರ್ಯ ಸಮಿತಿ ಮತ್ತು ಸರ್ವ ಸದಸ್ಯರ ಸಭೆಗಳು ಈಗಾಗಲೇ ನಿಗದಿಯಾಗಿರುವಂತೆ ನಡೆಸಲಾಗುವುದು ಎಂದು ಹೇಳಲಾಗಿದೆ.