alex Certify ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟ ಪತ್ರಕರ್ತ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟ ಪತ್ರಕರ್ತ

ದಾವಣಗೆರೆ ಜಿಲ್ಲೆ ಹೊನ್ನಾಳಿ ತಾಲ್ಲೂಕು ಕುಂದೂರು ಗ್ರಾಮದ ಪತ್ರಕರ್ತ ಕೊರೋನಾ ಭಯದಿಂದ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

46 ವರ್ಷದ ಪರಮೇಶ್ ಆತ್ಮಹತ್ಯೆ ಮಾಡಿಕೊಂಡವರು ಎಂದು ಹೇಳಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ಅಮರಾವತಿ ಸಮೀಪ ಚಲಿಸುವ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಕೆಲವು ದಿನಗಳಿಂದ ಜ್ವರ, ಕೆಮ್ಮು, ಶೀತ ಇದ್ದು, ಕೋವಿಡ್ ಟೆಸ್ಟ್ ಮಾಡಿಸಿದ ಸಂದರ್ಭದಲ್ಲಿ ತಮಗೆ ಪಾಸಿಟಿವ್ ಬಂದರೆ ಬೆಡ್, ವೆಂಟಿಲೇಟರ್, ಆಕ್ಸಿಜನ್ ಸಿಗುವುದಿಲ್ಲ ಎಂದು ಕೆಲವರ ಬಳಿ ಆತಂಕವ್ಯಕ್ತಪಡಿಸಿದ್ದರು. ಕೊರೋನಾ ಭಯದಿಂದ ಅವರು ಈ ರೀತಿ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಅವರಿಗೆ ಪತ್ನಿ, ಇಬ್ಬರು ಗಂಡು ಮಕ್ಕಳು ಇದ್ದಾರೆ. ‘ಆಂದೋಲನ’ ಸೇರಿದಂತೆ ಹಲವು ಪತ್ರಿಕೆಗಳಲ್ಲಿ, ದೃಶ್ಯ ಮಾಧ್ಯಮಗಳಲ್ಲಿ ಕೆಲಸ ಮಾಡಿದ್ದ ಪರಮೇಶ್ ‘ವಿಜಯ ಕರ್ನಾಟಕ’ದ ಅರೆಕಾಲಿಕ ವರದಿಗಾರರಾಗಿದ್ದರು. ಅನೇಕ ಹೋರಾಟಗಳಲ್ಲಿ ಭಾಗಿಯಾಗಿದ್ದರು. ಈ ಸಂಬಂಧ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...