
ಬೆಂಗಳೂರು: ನಿವೇಶನ ಮತ್ತು ಮನೆ ಹಂಚಿಕೆ ಸಂದರ್ಭದಲ್ಲಿ ಪತ್ರಕರ್ತರಿಗೆ ಮೀಸಲು ನೀಡುವ ನಿಟ್ಟಿನಲ್ಲಿ ಕೂಡಲೇ ಪ್ರಸ್ತಾವನೆಯನ್ನು ಸಿದ್ಧಪಡಿಸಿ ಸರ್ಕಾರಕ್ಕೆ ಮಂಡಿಸುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ವಿಧಾನಸೌಧದಲ್ಲಿ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಡಿಸಿಎಂ ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಸೇರಿದಂತೆ ಎಲ್ಲಾ ಸ್ಥಳೀಯ ಸಂಸ್ಥೆಗಳು, ಬಿಡಿಎ ಸೇರಿದಂತೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿವೇಶನ ಮತ್ತು ಮನೆ ಹಂಚಿಕೆ ಸಂದರ್ಭದಲ್ಲಿ ಪತ್ರಕರ್ತರಿಗೆ ಶೇ.5ರಷ್ಟು ಮೀಸಲು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ (KUWJ) ಮನವಿಸಲ್ಲಿಸಿದೆ. ಕಾನೂನು ತೊಡಕುಗಳು ಏನೇನು ಇದೆ? ಯಾವ ರೀತಿಯಲ್ಲಿ ಪತ್ರಕರ್ತರಿಗೆ ಸಹಾಯ ಮಾಡಬಹುದು ಎಂದು ಚರ್ಚೆ ನಡೆಸಿದರು.
ಶೇ.5 ರಿಯಾಯಿತಿ ಕೊಡುವುದು ಕಷ್ಟವಾಗಬಹುದು. ಆದರೆ, ಕನಿಷ್ಠ ಶೇ.1 ರಿಂದ ಶೇ.2ರಷ್ಟು ರಿಯಾಯಿತಿ ನೀಡಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಈ ಬಗ್ಗೆ ಶೀಘ್ರವೇ ಆದೇಶವನ್ನು ಹೊರಡಿಸಲು ಅಗತ್ಯವಿರುವ ಕ್ರಮಕ್ಕೆ ಮುಂದಾಗಬೇಕು ಎಂದು ಸೂಚಿಸಿದರು.