ಹೊಸಪೇಟೆ(ವಿಜಯನಗರ): ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರೈತರಿಗೆ ಅನುಕೂಲವಾಗಿರುವ ಕಿಸಾನ್ ಸಮ್ಮಾನ್ ಯೋಜನೆ ಸ್ಥಗಿತವಾಗುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಹೇಳಿದ್ದಾರೆ.
ವಿಜಯನಗರ ಜಿಲ್ಲೆ ಹರಪನಹಳ್ಳಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಭ್ರಷ್ಟಾಚಾರದಲ್ಲಿ ಭಾಗಿಯಾಗಿದ್ದಾರೆ. ಬಹುತೇಕ ಕಾಂಗ್ರೆಸ್ ನಾಯಕರು ಜಾಮೀನಿನ ಮೇಲೆ ಇದ್ದಾರೆ ಎಂದು ಹೇಳಿದ್ದಾರೆ.
ಬಿಜೆಪಿ ಪರ ಭರ್ಜರಿ ಪ್ರಚಾರ ನಡೆಸಿದ ನಡ್ಡಾ ಡಬಲ್ ಇಂಜಿನ್ ಸರ್ಕಾರಕ್ಕೆ ಬೆಂಬಲಿಸಿ ಎಂದು ಮನವಿ ಮಾಡಿದ್ದಾರೆ.