alex Certify BIG NEWS : ಇಂದು ರಾಜ್ಯಕ್ಕೆ ಜೆ.ಪಿ ನಡ್ಡಾ ಭೇಟಿ, ಬೆಳಗಾವಿಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

BIG NEWS : ಇಂದು ರಾಜ್ಯಕ್ಕೆ ಜೆ.ಪಿ ನಡ್ಡಾ ಭೇಟಿ, ಬೆಳಗಾವಿಯ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ಬೆಳಗಾವಿ : ಇಂದು ಕರ್ನಾಟಕಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಆಗಮಿಸುತ್ತಿದ್ದು , ಚಿಕ್ಕೋಡಿಯಲ್ಲಿ ಬೂತ್ ಕಾರ್ಯಕರ್ತರ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಇಂದು ಮಾರ್ಚ್ 4, 2024 ರಿಂದ ಎರಡು ದಿನಗಳ (ಸೋಮವಾರ ಮತ್ತು ಮಂಗಳವಾರ) ಪ್ರವಾಸಕ್ಕಾಗಿ ಕರ್ನಾಟಕಕ್ಕೆ ಆಗಮಿಸಲಿದ್ದು, ಅವರು ಅನೇಕ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ , ಚಿಕ್ಕೋಡಿಯಲ್ಲಿ ಬೂತ್ ಕಾರ್ಯಕರ್ತರ ಸಮಾವೇಶ ನಡೆಸಲಿದ್ದು, ಬೆಳಗಾವಿಯಲ್ಲಿ ಸ್ವನಿಧಿ ಯೋಜನೆಯ ಫಲಾನುಭವಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಮಾರ್ಚ್ 04 ರ ಸೋಮವಾರ ರಾತ್ರಿ 08:30 ಕ್ಕೆ ಕರ್ನಾಟಕದ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಮಾರ್ಚ್ 05 ರ ಮಂಗಳವಾರ ಬೆಳಿಗ್ಗೆ 11:15 ಕ್ಕೆ ಚಿಕ್ಕೋಡಿಯ ಕಿವಾಡ್ ಮೈದಾನದಲ್ಲಿ ಬೂತ್ ಕಾರ್ಯಕರ್ತರ ಸಮ್ಮೇಳನವನ್ನುದ್ದೇಶಿಸಿ ನಡ್ಡಾ ಮಾತನಾಡಲಿದ್ದಾರೆ. ಮಧ್ಯಾಹ್ನ 02:15 ಕ್ಕೆ ಬೆಳಗಾವಿಯ ಐಟಿಸಿ ವೆಲ್ಕಮ್ ಹೋಟೆಲ್ ನಲ್ಲಿ ಪ್ರಧಾನ ಮಂತ್ರಿ ಸ್ವನಿಧಿ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಲಿದ್ದಾರೆ. ನಂತರ ಸಂಜೆ 5.15ಕ್ಕೆ ಬೆಳಗಾವಿಯ ಜಿರ್ಗೆ ಸಭಾಂಗಣದಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

 

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...