alex Certify ಜೂ. 30 ರಂದು ‘K-TET’ ಪರೀಕ್ಷೆ ; ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಜೂ. 30 ರಂದು ‘K-TET’ ಪರೀಕ್ಷೆ ; ಅಭ್ಯರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : 2024ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (ಕೆಎಆರ್ಟಿಇಟಿ-2024) ಜೂ. 30 ರಂದು ನಡೆಯಲಿದೆ.

ಪರೀಕ್ಷೆಯು ಬೆಳಗ್ಗಿನ ಅವಧಿ 9.30 ರಿಂದ 12.00ರವರೆಗೆ 11 ಪರೀಕ್ಷಾ ಕೇಂದ್ರಗಳಲ್ಲಿ ಹಾಗೂ ಮಧ್ಯಾಹ್ನದ ಅವಧಿಯು 2.00 ರಿಂದ 4.30ರವರೆಗೆ 17 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತದೆ. ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಿಲಿನ 200 ಮೀ. ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಘೋಷಿಸಿರುತ್ತಾರೆ. ಪರೀಕ್ಷಾರ್ಥಿಗಳು ಪ್ರವೇಶ ಪತ್ರದ ಜೊತೆ ಕಡ್ಡಾಯವಾಗಿ ಯಾವುದಾದರೂ ಗುರುತಿನ ಚೀಟಿ ತರುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

ಸೂಚನೆಗಳು

*ಪರೀಕ್ಷೆಗೆ ಆಗಮಿಸುವ ಅಭ್ಯರ್ಥಿಗಳು ಮೊಬೈಲ್ ಫೋನ್, ಬ್ಲೂಟೂತ್ ಡಿವೈಸ್, ಪೇಜರ್, ವೈರ್ಲೆಸ್, ಕ್ಯಾಲ್ಕುಲೇಟರ್, ಮೊದಲಾದ ಎಲೆಕ್ಟ್ರಾನಿಕ್ ಉಪಕರಣಗಳು, ಸ್ಲೈಡ್ ರೂಲುಗಳು, ಮಾರ್ಕರ್ಗಳು, ಲಾಗ್ ಟೇಬಲ್ಗಳು, ವೈಟ್ಫ್ಲೂಯಿಡ್ಗಳು, ಬ್ಲೇಡು, ಇಂಕ್ ಎರೇಸರ್, ಬಿಳಿ ಫ್ಲೂಯಿಡ್, ಬೆಂಕಿ ಪೊಟ್ಟಣ, ಸಿಗರೆಟ್ ಲೈಟರ್ ಮುಂತಾದವುಗಳನ್ನು ಪರೀಕ್ಷಾ ಕೇಂದ್ರದ ಆವರಣದೊಳಗೆ ತರುವುದನ್ನು ನಿಷೇಧಿಸಲಾಗಿದೆ.

*ವಿಕಲಚೇತನ ಅಭ್ಯರ್ಥಿಗಳಿಗೆ ಸಂಬಂಧಿಸಿದಂತೆ ಅಂಗವಿಕಲತೆಯ ಪ್ರಮಾಣ ಪತ್ರವನ್ನಾಧರಿಸಿ ಪರೀಕ್ಷೆ ಬರೆಯಲು ಒಂದು ಗಂಟೆಗೆ ಇಪ್ಪತ್ತು ನಿಮಿಷಗಳಂತೆ 50 ನಿಮಿಷ ಹೆಚ್ಚಿನ ಕಾಲಾವಕಾಶ ನೀಡಿದೆ.
*ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರತಿ ಅಧಿವೇಶನದ ಪರೀಕ್ಷಾ ಪ್ರಾರಂಭದ ಅವಧಿಗಿಂತ ಒಂದು ಗಂಟೆ ಮುಂಚಿತವಾಗಿ ಹಾಜರಿರಬೇಕು. ಪರೀಕ್ಷೆ ಪತ್ರ ಇಲ್ಲದೇ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ. ಈ ಬಗ್ಗೆ ಯಾವುದೇ ವಿನಾಯಿತಿ ಇರುವುದಿಲ್ಲ.

*18 ಪರೀಕ್ಷಾ ಕೇಂದ್ರಗಳಿಗೆ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಸ್ಥಾನಿಕ ಜಾಗ್ರತಾ ದಳದ ಅಧಿಕಾರಿಗಳನ್ನು ಮತ್ತು ಮೊಬೈಲ್ ಸ್ವಾಧೀನ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ಪ್ರತಿ ಕೊಠಡಿಯಲ್ಲಿ 20 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಅದರಲ್ಲಿ ಪ್ರತಿ ಬೆಂಚ್ಗೆ ಇಬ್ಬರು ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಆಸನ ವ್ಯವಸ್ಥೆ ಸಜ್ಜುಗೊಳಿಸಲಾಗಿದೆ.

*ಪೂರ್ವ ಮುದ್ರಿತ ಓಎಂಆರ್ ನಲ್ಲಿ ಒಮ್ಮೆ ಬರೆದಿರುವುದನ್ನು ಪುನ: ಬದಲಾಯಿಸುವುದು , ತಿದ್ದುವುದು , ಬಿಳಿ ಪ್ಲ್ಯೂಯಿಡ್ ಬಳಸುವುದನ್ನು ಕಡ್ಡಾಯವಾಗಿ ನಿಷೇಧಿಸಿದೆ. ಬಿಳಿ ಪ್ಲ್ಯೂಯಿಡ್ ಹಚ್ಚಿ ಉತ್ತರ ಬದಲಾಯಿಸಲು ಅವಕಾಶವಿಲ್ಲ. ಇಂತಹ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನಕ್ಕೆ ಪರಿಗಣಿಸುವುದಿಲ್ಲ.

*ಆನ್ಲೈನ್ ಅರ್ಜಿಯನ್ನು ಸಲ್ಲಿಸುವಾಗ ಸಹಾಯಕ ಬರಹಗಾರರನ್ನು ಕೋರಿರುವರು ಒಂದು(01) ದಿನ ಮುಂಚಿತವಾಗಿ ಸಂಬಂಧಿಸಿದ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರನ್ನು ಭೇಟಿ ಮಾಡಿ ವಿವರವನ್ನು ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related News

Opinion Poll

  • ʼಮುಡಾʼ ಹಗರಣದಲ್ಲಿ ರಾಜೀನಾಮೆ ನೀಡ್ತಾರಾ ಸಿಎಂ ಸಿದ್ದರಾಮಯ್ಯ ?

    View Results

    Loading ... Loading ...