alex Certify ಆಂಧ್ರಪ್ರದೇಶದ ಪ್ರವಾಹ: 25 ಲಕ್ಷ ರೂ. ದೇಣಿಗೆ ನೀಡಿದ ಜೂ. NTR, ಮಹೇಶ್ ಬಾಬು | Kannada Dunia | Kannada News | Karnataka News | India News
ಕನ್ನಡ ದುನಿಯಾ
    Dailyhunt JioNews

Kannada Duniya

ಆಂಧ್ರಪ್ರದೇಶದ ಪ್ರವಾಹ: 25 ಲಕ್ಷ ರೂ. ದೇಣಿಗೆ ನೀಡಿದ ಜೂ. NTR, ಮಹೇಶ್ ಬಾಬು

ಭಾರಿ ಮಳೆಯಿಂದಾಗಿ ಆಂಧ್ರಪ್ರದೇಶದಲ್ಲಿ ಪ್ರವಾಹ ಉಂಟಾಗಿದೆ. ಹೀಗಾಗಿ, ಟಾಲಿವುಡ್ ನಟರಾದ ಜೂನಿಯರ್ ಎನ್ಟಿಆರ್ ಮತ್ತು ಮಹೇಶ್ ಬಾಬು ಸಂತ್ರಸ್ತರಿಗೆ ಸಹಾಯ ಹಸ್ತ ಚಾಚಿದ್ದಾರೆ. ಆಂಧ್ರಪ್ರದೇಶ ಸಿಎಂ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ.ಗಳನ್ನು ನೀಡಲು ನಿರ್ಧರಿಸಿದ್ದಾರೆ.

ತಮ್ಮ ದೇಣಿಗೆಯು ಪ್ರವಾಹ ಸಂತ್ರಸ್ತರ ಚೇತರಿಕೆಗೆ ಒಂದು ಸಣ್ಣ ಹೆಜ್ಜೆ ಎಂದು ಜೂ.ಎನ್ಟಿಆರ್ ಹೇಳಿದ್ದಾರೆ. ಆಂಧ್ರಪ್ರದೇಶದ ಪ್ರವಾಹದಿಂದ ಸಂತ್ರಸ್ತರಾಗಿರುವ ಜನರ ದುಃಸ್ಥಿತಿ ಕಂಡು ಸ್ಟಾರ್ ನಟ ಮರುಗಿದ್ದಾರೆ. ಈ ಬಗ್ಗೆ ಟ್ವಿಟ್ಟರ್ ನಲ್ಲಿ ಅವರು ಟ್ವೀಟ್ ಮಾಡಿದ್ದಾರೆ.

ನಟ ಮಹೇಶ್ ಬಾಬು ಕೂಡ ಆಂಧ್ರಪ್ರದೇಶ ಪ್ರವಾಹದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ಮುಂದೆ ಬಂದಿದ್ದಾರೆ. ವಿನಾಶಕಾರಿ ಪ್ರವಾಹದಿಂದ ಆಂಧ್ರಪ್ರದೇಶ ನಲುಗಿದೆ. ಸಿಎಂ ಪರಿಹಾರ ನಿಧಿಗೆ ತಲಾ 25 ಲಕ್ಷ ರೂ. ನೀಡಿದ್ದಾಗಿ ಅವರು ಟ್ವೀಟ್ ಮಾಡಿದ್ದಾರೆ. ಅಲ್ಲದೆ, ಈ ಬಿಕ್ಕಟ್ಟಿನ ಸಮಯದಲ್ಲಿ ಎಲ್ಲರೂ ಮುಂದೆ ಬಂದು ಆಂಧ್ರಪ್ರದೇಶಕ್ಕೆ ಸಹಾಯ ಮಾಡಬೇಕೆಂದು ಅವರು ವಿನಂತಿಸಿಕೊಂಡಿದ್ದಾರೆ.

ಆಂಧ್ರಪ್ರದೇಶದ ಪ್ರವಾಹದಲ್ಲಿ ಸಾಕಷ್ಟು ಮಂದಿ ಪ್ರಾಣ ಕಳೆದುಕೊಂಡಿದ್ದು, ಪರಿಸ್ಥಿತಿ ಇನ್ನೂ ಅತಂತ್ರವಾಗಿದೆ.

— Mahesh Babu (@urstrulyMahesh) December 1, 2021

Opinion Poll

  • ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಸರ್ಕಾರಕ್ಕೆ ಅನುಕೂಲಕರವಾಗಲಿದೆಯಾ ʼಗ್ಯಾರಂಟಿʼ ಯೋಜನೆಗಳು ?

    View Results

    Loading ... Loading ...