ಬೆಂಗಳೂರು : ಜು. 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿLKG , UKG ಆರಂಭಿಸಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದ್ದಾರೆ.
ರಾಜ್ಯದ ಅಂಗನವಾಡಿ ಕೇಂದ್ರಗಳ ಉನ್ನತೀಕರಣದ ಮೊದಲ ಭಾಗವಾಗಿ ಜುಲೈ 22 ರಿಂದ ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು (ಎಲ್ಕೆಜಿ, ಯುಕೆಜಿ) ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಜುಲೈ 22ರಂದು ರಾಜ್ಯದ 250 ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ತರಗತಿಗಳು ಸಾಂಕೇತಿಕವಾಗಿ ಆರಂಭವಾಗಲಿದೆ. ಮಕ್ಕಳಿಗೆ ಇಲಾಖೆ ವತಿಯಿಂದಲೇ ಬ್ಯಾಗ್, ಪುಸ್ತಕ, ಸಮವಸ್ತ್ರ ವಿತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಮೊದಲ ಹಂತದಲ್ಲಿ 15-20 ಸಾವಿರ ಶಾಲೆಗಳಲ್ಲಿ ಗವರ್ನಮೆಂಟ್ ಮಾಂಟೆಸ್ಸರಿ ಕೂಡ ಆರಂಭಿಸುತ್ತೇವೆ. ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವವಿಮಾ ಯೋಜನೆ ಕುರಿತು ಶೀಘ್ರ ನಿರ್ಧಾರ ಮಾಡಲಾವುದು ಎಂದಿದ್ದಾರೆ.