ಮುಂಬೈ: ಜಾಮೀನು ನೀಡಸಲು 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಡಿ ಮಹಾರಾಷ್ಟ್ರದ ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧನಂಜಯ್ ನಿಕಂ ಮತ್ತು ಇತರೆ ಮೂವರನ್ನು ಬಂಧಿಸಲಾಗಿದೆ.
ಅವರ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ ಪ್ರಕರಣ ದಾಖಲಿಸಿದೆ. ಸತಾರಾ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಧನಂಜಯ್ ನಿಕಂ ಅವರ ಪರವಾಗಿ ಕಿಶೋರ್ ಖರತ್ ಮತ್ತು ಆನಂದ್ ಖರತ್ ಅವರು ಲಂಚಕ್ಕೆ ಬೇಡಿಕೆ ಇಟ್ಟ ಆರೋಪ ಕೇಳಿಬಂದಿದೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿರುವ ನಮ್ಮ ತಂದೆಯವರ ಜಾಮೀನು ಅರ್ಜಿಯನ್ನು ನ್ಯಾಯಾಧೀಶರು ತಡೆ ಹಿಡಿದಿದ್ದಾರೆ. ಖಾಸಗಿ ವ್ಯಕ್ತಿಗಳ ಮೂಲಕ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಮಹಿಳೆಯೊಬ್ಬರು ಆರೋಪಿಸಿದ್ದರು.
ಸತಾರಾ ಹೋಟೆಲ್‌ನಲ್ಲಿ ಬಲೆ ಬೀಸಿ ಪೊಲೀಸರು ನ್ಯಾಯಾಧೀಶರನ್ನು ರೆಡ್‌ಹ್ಯಾಂಡ್ ಆಗಿ ಹಿಡಿದಿದ್ದಾರೆ. ಬಳಿಕ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮಕೈಗೊಳ್ಳಲಾಗಿದೆ. ನ್ಯಾಯಾಲಯದ ಆವರಣದಲ್ಲಿ ಈ ಘಟನೆ ನಡೆದಿರುವುದು ಗಮನಾರ್ಹವಾಗಿದೆ.