ಬೆಂಗಳೂರು: ಮಹಿಳೆ ಅಪಹರಣ ಪ್ರಕರಣದಲ್ಲಿ ಜೆಡಿಎಸ್ ಶಾಸಕ ಹೆಚ್.ಡಿ. ರೇವಣ್ಣ ಅವರನ್ನು 4ದಿನಗಳ ಕಾಲ ಎಸ್ಐಟಿ ವಶಕ್ಕೆ ನೀಡಲಾಗಿದೆ.
ನ್ಯಾಯಾಧೀಶರಾದ ರವೀಂದ್ರ ಕಟ್ಟಿಮನಿ ಆದೇಶಿಸಿದ್ದಾರೆ. ನಿನ್ನೆ ಸಂಜೆ ಬಂಧಿಸಲಾಗಿದ್ದ ರೇವಣ್ಣ ಅವರನ್ನು ಇಂದು ಜಡ್ಜ್ ಎದುರು ಹಾಜರುಪಡಿಸಲಾಗಿತ್ತು. ಮೇ 8ರವರೆಗೆ ವಿಚಾರಣೆಗಾಗಿ ರೇವಣ್ಣ ಅವರನ್ನು ಎಸ್ಐಟಿ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.
ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಾರೆ ಎನ್ನಲಾದ ಸಂತ್ರಸ್ತೆಯ ಅಪಹರಣ ಪ್ರಕರಣದಲ್ಲಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರನ್ನು ನಿನ್ನೆ ಬಂಧಿಸಿದ್ದ ಸಿಐಡಿ ವಿಶೇಷ ತನಿಖಾ ತಂಡ(SIT) ಇಂದು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು.