ಇಂದೋರ್: ಮಧ್ಯಪ್ರದೇಶದ ಇಂದೋರ್ ಹೈಕೋರ್ಟ್ ಪೀಠ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ ಆರೋಪದಿಂದ 40 ವರ್ಷದ ವ್ಯಕ್ತಿಯನ್ನು ಖುಲಾಸೆಗೊಳಿಸಿದೆ.
ವೈವಾಹಿಕ ಸಂಬಂಧ ಮುಂದುವರಿಸುವಲ್ಲಿ ಪತಿ ತನ್ನ ಪತ್ನಿಯೊಂದಿಗೆ ಯಾವುದೇ ಲೈಂಗಿಕ ಕ್ರಿಯೆಯನ್ನು ಅತ್ಯಾಚಾರ ಎಂದು ಪರಿಗಣಿಸಲಾಗುವುದಿಲ್ಲ. ಪತ್ನಿಗೆ 15 ವರ್ಷಕ್ಕಿಂತ ಕಡಿಮೆ ವಯಸ್ಸಿನ ಹೊರತು ಸಮ್ಮತಿಯ ಯಾವುದೇ ಮೌಲ್ಯ ಇರುವುದಿಲ್ಲ ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ತನ್ನ ಪತ್ನಿ ದಾಖಲಿಸಿದ್ದ ಪ್ರಕರಣ ರದ್ದುಗೊಳಿಸುವಂತೆ ಕೋರಿ 40 ವರ್ಷದ ವ್ಯಕ್ತಿ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದು, ನ್ಯಾಯಮೂರ್ತಿ ಪ್ರೇಮ್ ನಾರಾಯಣ್ ಸಿಂಗ್ ಅವರ ಏಕ ಸದಸ್ಯಪೀಠ ಮೇ 28ರಂದು ಭಾಗಶಃ ಅನುಮತಿ ನೀಡಿದ್ದು, ಎರಡೂ ಕಡೆಯ ವಾದಗಳನ್ನು ಪರಿಗಣಿಸಿದ ಹೈಕೋರ್ಟ್ ಐಪಿಸಿ ಸೆಕ್ಷನ್ 294 ಮತ್ತು 506ರ ಅಡಿಯಲ್ಲಿ ಆರೋಪಗಳನ್ನು ರದ್ದುಗೊಳಿಸಿದೆ.
20 ಲಕ್ಷ ರೂಪಾಯಿ ವರದಕ್ಷಿಣೆ ನೀಡದ ಕಾರಣ ಪತಿ ಮತ್ತು ಅತ್ತೆ ಮಾವಂದಿರು ದೈಹಿಕ ಮಾನಸಿಕವಾಗಿ ಹಿಂಸಿಸಿದ್ದಾರೆ ಎಂದು 2023ರಲ್ಲಿ ಮಹಿಳೆ ದೂರು ದಾಖಲಿಸಿದ್ದರು. 2022ರಲ್ಲಿ ಪತಿ ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದರಿಂದ ಸೋಂಕಿಗೆ ಒಳಗಾಗಿ ಚಿಕಿತ್ಸೆ ಪಡೆದುಕೊಂಡಿದ್ದಾಗೆ ದೂರು ನೀಡಿದ್ದರು.