
ಜಮ್ಮು ಕಾಶ್ಮೀರದ 19 ಕ್ಷೇತ್ರಗಳಲ್ಲಿ ಸ್ಪರ್ಧಿಸಿದ್ದ ಬಿಜೆಪಿ ಅಭ್ಯರ್ಥಿಗಳು ಬಹುತೇಕ ಕ್ಷೇತ್ರಗಳಲ್ಲಿ ಗೆಲುವು ಸಾಧಿಸದಿದ್ದರೂ ಸಹ ಗಣನೀಯ ಸಾಧನೆ ಮಾಡಿದ್ದಾರೆ. ಮುಸ್ಲಿಮರು ಬಿಜೆಪಿಗೆ ಮತ ನೀಡುವುದಿಲ್ಲವೆಂಬ ಮಾತು ಸುಳ್ಳಾಗಿದ್ದು, ಕಾಶ್ಮೀರ ಕಣಿವೆಯ ಬಾರಾಮುಲ್ಲಾದ ಗುರೇಜ್ ವಿಧಾನಸಭಾ ಕ್ಷೇತ್ರದಲ್ಲಿ ಶೇ.97 ರಷ್ಟು ಮುಸ್ಲಿಂ ಜನಸಂಖ್ಯೆ ಇದ್ದು ಇಲ್ಲಿ ಕಣಕ್ಕಿಳಿದಿದ್ದ ಬಿಜೆಪಿ ಅಭ್ಯರ್ಥಿ ಶೇ.40.34 ರಷ್ಟು ಮತ ಪಡೆದಿದ್ದಾರೆ.
ಈ ಕ್ಷೇತ್ರದಲ್ಲಿ ಒಟ್ಟು ಮತದಾರರ ಸಂಖ್ಯೆ 22,291 ಆಗಿದ್ದು, ಚಲಾವಣೆಯಾದ 17,962 ಮತಗಳ ಪೈಕಿ ಗೆಲುವು ಸಾಧಿಸಿದ ನ್ಯಾಷನಲ್ ಕಾನ್ಫರೆನ್ಸ್ ನ ನಜೀರ್ ಅಹಮದ್ ಖಾನ್ 8,378 (ಶೇ.46.64) ಮತಗಳನ್ನು ಪಡೆದಿದ್ದರೆ, ಅವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಫಕೀರ್ ಮೊಹಮ್ಮದ್ ಖಾನ್ 7,246 (ಶೇ.40.34) ಮತ ಪಡೆದಿದ್ದಾರೆ. ಕೇವಲ 1,132 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಸೋತಿದ್ದಾರೆ. ಕಾಶ್ಮೀರದ ಇನ್ನೂ ಹಲವು ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಉತ್ತಮ ಸಾಧನೆ ಮಾಡಿದ್ದಾರೆ.

