ಸಿಆರ್ ಬಾಬಿ ನಿರ್ದೇಶನದ ಶೈನ್ ಶೆಟ್ಟಿ ಅಭಿನಯದ ‘ಜಸ್ಟ್ ಮ್ಯಾರೀಡ್’ ಚಿತ್ರದ ಶೂಟಿಂಗ್ ಈಗಾಗಲೇ ಬಹುತೇಕ ಪೂರ್ಣಗೊಂಡಿದ್ದು, ಇನ್ನೇನು ಶೀಘ್ರದಲ್ಲೇ ಬಿಡುಗಡೆ ದಿನಾಂಕ ಘೋಷಣೆಯಾಗುವ ಸಾಧ್ಯತೆ ಇದೆ. ‘ಜಸ್ಟ್ ಮ್ಯಾರೀಡ್’ ಚಿತ್ರತಂಡ ಗಣೇಶ ಚತುರ್ಥಿಯ ದಿನದಂದು ವಿಶೇಷ ಪೋಸ್ಟರ್ ಒಂದನ್ನು ಬಿಡುಗಡೆ ಮಾಡಿದ್ದು ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡುವ ಮೂಲಕ ಗಣೇಶ ಚತುರ್ಥಿಯ ಶುಭಾಶಯಗಳು ಎಂದು ಬರೆದುಕೊಂಡಿದೆ.
abbs ಸ್ಟುಡಿಯೋಸ್ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ ಮಾಡಿದ್ದು, ಬಿಗ್ ಬಾಸ್ ಖ್ಯಾತಿಯ ಶೈನ್ ಶೆಟ್ಟಿ ಮತ್ತು ಅಂಕಿತಾ ಅಮರ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಬಿ ಅಜನೀಶ್ ಲೋಕನಾಥ್ ಸಂಗೀತ ಸಂಯೋಜನೆ ನೀಡಿದ್ದು, ಆಶಿಕ್ ಕುಸುಗೊಳ್ಳಿ ಸಂಕಲನ, ಅಮರ್ ಕಲಾ ನಿರ್ದೇಶನ, ಬಾಬಾ ಭಾಸ್ಕರ್ ಬ್ಬಾಸ್ಕರ್ ಅವರ ನೃತ್ಯ ನಿರ್ದೇಶನವಿದೆ.