ಬೆಂಗಳೂರು : ಗಂಗಾ ಕಲ್ಯಾಣ ಯೋಜನೆಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 15 ಕೊನೆಯ ದಿನವಾಗಿದ್ದು, ಅರ್ಹ ರೈತರು ಸರಿಯಾದ ದಾಖಲೆ ಸಮೇತ ಅರ್ಜಿ ಸಲ್ಲಿಸುವಂತೆ ಕೋರಲಾಗಿದೆ.
ಸಮಾಜ ಕಲ್ಯಾಣ ಇಲಾಖೆಯಡಿ ವಿವಿಧ ನಿಗಮಗಳಿಂದ ಅರ್ಜಿ ಆಹ್ವಾನಿಸಲಾಗಿದ್ದು, ಗಂಗಾ ಕಲ್ಯಾಣ ಯೋಜನೆಯಡಿ 1.20 ಎಕರೆಯಿಂದ 5.00 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆಬಾವಿ ಕೊರೆದು ಪಂಪ್ ಸೆಟ್ ಅಳವಡಿಸಿ, ವಿದ್ಯುದೀಕರಣಗೊಳಿಸಿ ನೀರಾವರಿ ಸೌಲಭ್ಯ ಕಲ್ಪಿಸಲಾಗುತ್ತದೆ.
1.20 ಎಕರೆಯಿಂದ 5 ಎಕರೆ ಜಮೀನು ಹೊಂದಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಕೊಳವೆ ಬಾವಿ ಕೊರೆದು ಪಂಪ್ಸೆಟ್ ಅಳವಡಿಸಿ ವಿದ್ಯದ್ಧೀಕರಣಗೊಳಿಸಿ ನೀರಾವರಿ ಸೌಲಭ್ಯ ಒದಗಿಸಲಾಗುವುದು. ಘಟಕ ವೆಚ್ಚ ರೂ.3.75 ಲಕ್ಷ (ಇದರಲ್ಲಿ ರೂ.50 ಸಾವಿರ ಸಾಲವೂ ಸೇರಿರುತ್ತದೆ.)
ಬೇಕಾಗುವ ದಾಖಲೆಗಳು
1) ಪರಿಶಿಷ್ಟಜಾತಿ/ಪಂಗಡದವರಾಗಿದ್ದು, ಜಾತಿ ಪ್ರಮಾಣಪತ್ರ ಹೊಂದಿರಬೇಕು
2) ಆದಾಯ ಮಿತಿ ಗ್ರಾಮೀಣ ಪ್ರದೇಶದಲ್ಲಿ ರೂ1.5 ಲಕ್ಷ, ನಗರ ಪ್ರದೇಶದಲ್ಲಿ ರೂ.2.00 ಲಕ್ಷ
3) ಕನಿಷ್ಠ 21 ವರ್ಷ ವಯೋಮಾನ
4) ಸಣ್ಣಹಿಡುವಳಿದಾರರ ಪ್ರಮಾಣಪತ್ರ ಹಾಗೂ ಇತ್ತೀಚಿನ ಪಹಣಿ ಆದಾಯ ಪ್ರಮಾಣ ಪತ್ರ, ಕುಟು೦ಬದ ಪಡಿತರ ಚೀಟಿ, ಬ್ಯಾಂಕ್ ಪಾಸ್ ಬುಕ್
ಆಸಕ್ತರು ಡಿಸೆಂಬರ್ 15 ರ ಒಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.