
ಸಿನಿಮಾಗಳಲ್ಲಿ ಹಾಗೂ ಧಾರವಾಹಿಗಳಲ್ಲಿ ಸೀರೆಯಲ್ಲಿ ಕಾಣಿಸಿಕೊಳ್ಳುವ ಜ್ಯೋತಿ ರೈ ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಬೋಲ್ಡ್ ಅವತಾರಗಳ ಮೂಲಕ ಪಡ್ಡೆ ಹುಡುಗರ ಎದೆಯಲ್ಲಿ ಕಚಗುಳಿ ಇಡುತ್ತಿದ್ದಾರೆ.
ಕಿರುತೆರೆ ಹಾಗೂ ಬೆಳ್ಳಿತೆರೆ ಎರಡರಲ್ಲೂ ಸಕ್ರಿಯರಾಗಿರುವ ಜ್ಯೋತಿ ರೈ ತಮ್ಮ ಹಾಟ್ ಫೋಟೋಗಳ ಮೂಲಕವೇ ಸಾಕಷ್ಟು ಸುದ್ದಿಯಲ್ಲಿದ್ದಾರೆ. ದಿನಕ್ಕೊಂದು ಫೋಟೋಗಳನ್ನು ಹಂಚಿಕೊಳ್ಳುವ ಮೂಲಕ ನೆಟ್ಟಿಗರೊಂದಿಗೆ ಸದಾ ಸಂಪರ್ಕದಲ್ಲಿದ್ದಾರೆ.
ಜ್ಯೋತಿ ರೈ ಇತ್ತೀಚಿಗಷ್ಟೇ ಫೋಟೋಶೂಟ್ ಮಾಡಿಸಿದ್ದು ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಈ ಫೋಟೋಗಳಿಗೆ ಲೈಕ್ಸ್ ಹಾಗೂ ಕಮೆಂಟ್ಸ್ ಗಳ ಸುರಿಮಳೆ ಹರಿದುಬಂದಿವೆ. ಕಿನ್ನರಿ ಧಾರಾವಾಹಿ ಮೂಲಕ ಸಾಕಷ್ಟು ಜನಪ್ರಿಯತೆ ಪಡೆದ ಇವರು ಇತ್ತೀಚಿಗೆ ಸಿನಿಮಾಗಳಲ್ಲಿ ಮಿಂಚುತ್ತಿದ್ದಾರೆ.

