
ಕೇಂದ್ರ ನಾಗರಿಕ ವಿಮಾನಯಾನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಅವರು ರೊಮೇನಿಯಾದ ಪ್ರಧಾನ ಮಂತ್ರಿ ನಿಕೊಲೇ ಸಿಯುಕಾ ಅವರನ್ನು ಭೇಟಿ ಮಾಡಿದ್ದಾರೆ.
ಉಕ್ರೇನ್ ನಿಂದ ಭಾರತೀಯ ನಾಗರಿಕರ ಪ್ರವೇಶವನ್ನು ಸುಗಮಗೊಳಿಸಿದ್ದಕ್ಕಾಗಿ ಮತ್ತು ಅವರ ಸುರಕ್ಷತೆಯನ್ನು ಖಾತ್ರಿಪಡಿಸಿದ್ದಕ್ಕಾಗಿ ರೊಮೇನಿಯಾ ಸರ್ಕಾರಕ್ಕೆ ಧನ್ಯವಾದ ಹೇಳಿದ್ದಾರೆ.
ರಷ್ಯಾದ ಆಕ್ರಮಣದ ನಂತರ ಉಕ್ರೇನ್‌ನಿಂದ ಭಾರತೀಯ ನಾಗರಿಕರ ಪ್ರವೇಶವನ್ನು ಸುಗಮಗೊಳಿಸಿದ ಮತ್ತು ಸುರಕ್ಷತೆಯನ್ನು ಖಾತ್ರಿಪಡಿಸಿದ್ದಕ್ಕಾಗಿ ಅವರ ಸರ್ಕಾರಕ್ಕೆ ಧನ್ಯವಾದ ಅರ್ಪಿಸಿದ್ದಾರೆ.
ರೋಮೇನಿಯನ್ ಗಡಿಗಳನ್ನು ದಾಟುತ್ತಿರುವ ನಮ್ಮ ವಿದ್ಯಾರ್ಥಿಗಳಿಗೆ ನಿರಂತರ ಬೆಂಬಲದ ಭರವಸೆ ನೀಡಿದ್ದಾರೆ ಮತ್ತು ಕಳೆದ 74 ವರ್ಷಗಳಿಂದ ನಮ್ಮ ದೇಶಗಳ ನಡುವಿನ ಸ್ನೇಹ ಸಂಬಂಧವನ್ನು ಪುನರುಚ್ಚರಿಸಿದ್ದಾರೆ ಎಂದು ಹೇಳಲು ನನಗೆ ಸಂತೋಷವಾಗಿದೆ ಎಂದು ಸಿಂಧಿಯಾ ತಿಳಿಸಿದ್ದಾರೆ.
ಯುದ್ಧ ಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಸ್ಥಳಾಂತರ ಮಾಡಲು ಸಿಂಧಿಯಾ ಸೇರಿ ನಾಲ್ವರು ಕೇಂದ್ರ ಸಚಿವರ ತಂಡಗಳನ್ನು ಉಕ್ರೇನ್ ಜೊತೆಗೆ ಗಡಿ ಹಂಚಿಕೊಂಡಿರುವ ದೇಶಗಳಿಗೆ ಕಳಿಸಲಾಗಿದೆ.