ಬೆಂಗಳೂರು: ಅನ್ನಭಾಗ್ಯ ಯೋಜನೆಯಡಿ ಪಡಿತರ ಚೀಟಿದಾರರಿಗೆ ಆಹಾರ ಧಾನ್ಯ ಉಚಿತವಾಗಿ ನೀಡುತ್ತಿದ್ದು, ಇದಕ್ಕೆ ಕನಿಷ್ಠ ಬೆಲೆ ನಿಗದಿಪಡಿಸಲಾಗುತ್ತದೆ. ಅಕ್ಕಿ ಕೆಜಿಗೆ 2 -3 ರೂ. ದರ ವಿದಿಸಲಾಗುವುದು ಎಂದು ಹೇಳಲಾಗಿತ್ತು.
ಆದರೆ, ಇಂತಹ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಆಹಾರ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ. ಅನ್ನಭಾಗ್ಯ ಯೋಜನೆಯ ಪಡಿತರ ಆಹಾರ ಧಾನ್ಯಗಳಿಗೆ ಕನಿಷ್ಠ ಬೆಲೆ ನಿಗದಿ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ. ಬಜೆಟ್ ಪೂರ್ವ ಸಭೆಯಲ್ಲಿ ಕೂಡ ಈ ಕುರಿತು ಚರ್ಚೆ ನಡೆದಿಲ್ಲ ಎಂದು ತಿಳಿಸಿದ್ದಾರೆ.
ಏಪ್ರಿಲ್ 1 ರಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಮೈಸೂರು ಸ್ಯಾಂಡಲ್ ಸೋಪ್, ಉಪ್ಪು, ಬೇಳೆ, ಎಣ್ಣೆ, ಸಕ್ಕರೆ ಮಾರಾಟಕ್ಕೆ ಅವಕಾಶ ನೀಡುವ ಬಗ್ಗೆ ತೀರ್ಮಾನಿಸಲಾಗಿದೆ ಎಂದು ಹೇಳಲಾಗಿದೆ.