ಬೆಂಗಳೂರು: ಮುಖ್ಯಮಂತ್ರಿಗಳನ್ನು ಭೇಟಿಯಾಗಿದ್ದು ಸಾಬೀತುಪಡಿಸಿದರೆ ಬಹಿರಂಗವಾಗಿ ನೇಣಿಗೇರಲು ಸಿದ್ಧ ಎಂದು ಬೆಂಗಳೂರಿನಲ್ಲಿ ಮಹಾಲಕ್ಷ್ಮಿ ಲೇಔಟ್ ಶಾಸಕ ಕೆ. ಗೋಪಾಲಯ್ಯ ಹೇಳಿದ್ದಾರೆ.
ಯಾವುದೇ ಕಾರಣಕ್ಕೂ ನಾನು ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ನನಗೆ ಸ್ವೀಕರಿಸಲು ಸಾಧ್ಯವಾಗದಷ್ಟು ದೂರವಾಣಿ ಕರೆಗಳು ಬರುತ್ತಿವೆ. 10 ದಿನಗಳ ಹಿಂದೆ ಪಕ್ಷದ ಕಚೇರಿಯಲ್ಲಿ ಒಂದು ಮಾತು ಕೊಟ್ಟಿದ್ದೇನೆ. ಬಿಜೆಪಿಗೆ ಬಂದ ನಂತರ ಪಕ್ಷ ನನಗೆ ಗೌರವದ ಸ್ಥಾನಮಾನ ಕೊಟ್ಟಿದೆ. ಐದು ವರ್ಷ ವಿರೋಧ ಪಕ್ಷದಲ್ಲಿ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ.