ಬೆಂಗಳೂರು: ಮದ್ಯದ ದರ ಹೆಚ್ಚಾಗುವ ಆತಂಕದಲ್ಲಿದ್ದ ಮದ್ಯಪ್ರಿಯರಿಗೆ ಮುಖ್ಯವಾದ ಮಾಹಿತಿ ಇಲ್ಲಿದೆ. ರಾಜ್ಯದಲ್ಲಿ ಮದ್ಯದ ದರ ಹೆಚ್ಚಳಕ್ಕೆ ಸರ್ಕಾರ ಚಿಂತನೆ ನಡೆಸಿಲ್ಲ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಹೇಳಿದ್ದಾರೆ.
ವಿಧಾನಸೌಧದಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮದ್ಯದ ದರ ಹೆಚ್ಚಳ ಮಾಡುವ ಚಿಂತನೆ ಸರ್ಕಾರಕ್ಕಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ ರಾಜೀನಾಮೆ ನೀಡಿದ 17 ಜನರಲ್ಲಿ ಬಿಜೆಪಿಯಿಂದ ಗೆದ್ದು ಶಾಸಕರಾದವರಿಗೆ ಅಧಿಕಾರ, ಸ್ಥಾನಮಾನ ನೀಡಿದೆ. ಬಿಜೆಪಿಯನ್ನು ತೊರೆಯುವ ಪ್ರಶ್ನೆಯೇ ಇಲ್ಲ ಎಂದು ಅವರು ಹೇಳಿದ್ದಾರೆ.